ಮೈಸೂರು

ಚುನಾವಣಾ ಸಂಬಂಧ ಜಿಲ್ಲಾಧಿಕಾರಿ ಕಾರ್ಯಾಲಯದ ಸಾಮಾಜಿಕ ಜಾಲತಾಣ ನಿರ್ವಹಣೆಗೆ ವಿಶೇಷ ತಂಡ

ಮೈಸೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಸಂಬಂಧ ಮೈಸೂರು ಜಿಲ್ಲಾಧಿಕಾರಿಗಳ ಕಾರ್ಯಾಲಯದ ವತಿಯಿಂದ ರಾಜ್ಯದಲ್ಲಿ ಪ್ರಥಮ ಬಾರಿಗೆ ಮೈಸೂರು ವಿ.ವಿಯ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕರಾದ ಎನ್.ಮಮತ ನೇತೃತ್ವದಲ್ಲಿ ವಿದ್ಯಾರ್ಥಿಗಳ ತಂಡಯೊಂದನ್ನು ಸಾಮಾಜಿಕ ಜಾಲತಾಣ ನಿರ್ವಹಣೆಗೆ ನೇಮಿಸಿದೆ.

ಕರ್ನಾಟಕ ರಾಜ್ಯದಲ್ಲಿ ಚುನಾವಣಾ ಪ್ರಚಾರವೂ ಬಹಳ ಕ್ಷಿಪ್ರಗತಿಯಲ್ಲಿ ನಡೆಯುತ್ತಿದ್ದು ಚುನಾವಣಾ ನೀತಿಸಂಹಿತೆ ಹಿನ್ನೆಲೆಯಲ್ಲಿ ಮೈಸೂರು ಕ್ಷೇತ್ರವಾರು ಚುನಾವಣಾ ಕಾರ್ಯಕ್ರಮಗಳು, ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಪ್ರಕ್ರಿಯೆ ಮಾಹಿತಿ, ಕ್ಷೇತ್ರವಾರು ಭೇಟಿ, ಪರಿಶೀಲನೆ ಗಳನ್ನು ಈ ಜಾಲತಾಣದಲ್ಲಿ ಕಾಣಬಹುದಾಗಿದೆ.

ಆಗ್ಗಾಗೆ ಚುನಾವಣಾ ಆಯೋಗದಿಂದ ಹೊರಡಿಸುವ ಆದೇಶಗಳು, ಮತದಾನದ ಕುರಿತ ಜಾಗೃತಿ ಕಾರ್ಯಕ್ರಮಗಳು , ಚುನಾವಣಾ ಪ್ರಕ್ರಿಯೆಯಲ್ಲಿ ಜಿಲ್ಲಾಡಳಿತ ಕಾರ್ಯವೈಖರಿಯನ್ನು ಸಾರ್ವಜನಿಕರಿಗೆ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ , ಟ್ವಿಟರ್, ಇನ್ಸ್ಟಗ್ರಾಮ್ ನ dcmysuru ಖಾತೆಯ ಮೂಲಕ ಮಾಹಿತಿ ತಲುಪಿಸುವುದು ಇದರ ಉದ್ದೇಶ ವಾಗಿದ್ದು, ಹಾಗೇಯೇ ಇದರಲ್ಲಿ ವಿದ್ಯಾರ್ಥಿಗಳು ಭಾಗಿಯಾಗಿರುವುದು ಚುನಾವಣಾ ಪ್ರಕ್ರಿಯೆ ಬಗ್ಗೆ ಅರಿಯಲು ಉತ್ತಮ ಅನುಕೂಲವಾಗಲಿದೆ.

andolanait

Recent Posts

ಓದುಗರ ಪತ್ರ: ಶಾಸಕರ ಅಸಂಬದ್ಧ ಹೇಳಿಕೆ

ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…

2 hours ago

ಓದುಗರ ಪತ್ರ: ಅಮಿತ್‌ ಶಾ ಹೇಳಿಕೆ ಖಂಡನೀಯ

ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…

2 hours ago

ವಾಹನ ಸಂಚಾರಕ್ಕೆ ಸಂಚಕಾರ ತರುತ್ತಿರುವ ಅವರೆಕಾಯಿ ವ್ಯಾಪಾರ

ದಾ.ರಾ. ಮಹೇಶ್‌ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…

3 hours ago

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

  ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…

4 hours ago

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

13 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

13 hours ago