ಮೈಸೂರು

ಯುಗಾದಿ-ರಂಜಾನ್‌ಗೆ ಮೈಸೂರು-ವಿಜಯಪುರ ನಡುವೆ ವಿಶೇಷ ರೈಲು ; ಇಲ್ಲಿದೆ ವೇಳಾಪಟ್ಟಿ

ಮೈಸೂರು: ಮುಂಬರುವ ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರು ಮತ್ತು ವಿಜಯಪುರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.

ರೈಲು ಸಂಖ್ಯೆ ೦೬೫೬೭ ಮೈಸೂರು-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಮಾ.೨೮ರಂದು ಸಂಜೆ ೭.೧೦ಕ್ಕೆ ಮೈಸೂರಿನಿಂದ ಹೊರಟು, ಮರುದಿನ ಮಧ್ಯಾಹ್ನ ೨.೦೫ಕ್ಕೆ ವಿಜಯಪುರ ತಲುಪಲಿದೆ.

ರೈಲು ಸಂಖ್ಯೆ ೦೬೫೬೮ ವಿಜಯಪುರ – ಮೈಸೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಮಾ.೩೧ರಂದು ಸಂಜೆ ೭ಗಂಟೆಗೆ ವಿಜಯಪುರದಿಂದ ಹೊರಟು, ಮರುದಿನ ಮಧ್ಯಾಹ್ನ ೨.೨೦ಗಂಟೆಗೆ ಮೈಸೂರು ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಎರಡೂ ಮಾರ್ಗಗಳಲ್ಲಿ ಮಂಡ್ಯ, ಕೆಂಗೇರಿ, ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕಂಟೋನ್ಮೆಂಟ್, ತೋರಣಗಲ್ಲು, ಹೊಸಪೇಟೆ, ಕೊಪ್ಪಳ, ಗದಗ, ಬದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ಈ ರೈಲು ೩ ಎಸಿ ಟು ಟೈರ್, ೬ ಎಸಿ ತ್ರಿ ಟೈರ್, ೧೦ ಸ್ಲೀಪರ್ ಕ್ಲಾಸ್, ೨ ಜನರಲ್ ಸೆಕೆಂಡ್ ಕ್ಲಾಸ್ ಮತ್ತು ೨ ಎಸ್‌ಎಲಆರ್/ ಡಿ ಬೋಗಿಗಳನ್ನು ಒಳಗೊಂಡಿರುತ್ತದೆ.

ಕಾಯ್ದಿರಿಸುವಿಕೆ, ಆಗಮನ ಮತ್ತು ನಿರ್ಗಮನ ಸಮಯ ಮತ್ತು ಹೆಚ್ಚಿನ ವಿವರಗಳಿಗಾಗಿ, ಪ್ರಯಾಣಿಕರು ಅಧಿಕೃತ ರೈಲ್ವೆ ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವಾ ಹತ್ತಿರದ ರೈಲ್ವೆ ಬುಕಿಂಗ್ ಕೌಂಟರ್‌ಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ನೈಋತ್ಯ ರೈಲ್ವೆ ಮೈಸೂರು ವಿಭಾಗದ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ ಧರ್ಮರಾಜ ಕಲಗೊಂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

19 mins ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

55 mins ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

57 mins ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

58 mins ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

59 mins ago

ಬೂದಿಪಡಗ ಆನೆ ಶಿಬಿರದಿಂದ 63 ವರ್ಷದ ಗಜೇಂದ್ರ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ

ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…

1 hour ago