Mysore
21
few clouds

Social Media

ಶನಿವಾರ, 24 ಜನವರಿ 2026
Light
Dark

ಮೈಸೂರಿಂದ ಜೈಪುರಕ್ಕೆ ವಿಶೇಷ ರೈಲು : ಸಂಸದ ಯದುವೀರ್‌ ಮನವಿಗೆ ಸ್ಪಂದನೆ

ಮೈಸೂರು : ದೀಪಾವಳಿ ಹಬ್ಬದ ಹಿನ್ನೆಲೆ ಮೈಸೂರಿನಿಂದ ಜೈಪುರಕ್ಕೆ ಹೆಚ್ಚುವರಿ ರೈಲು ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂಬ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿಗೆ ಸ್ಪಂದಿಸಿರುವ ರೈಲ್ವೆ ಇಲಾಖೆ, ಇದಕ್ಕೆ ಕ್ರಮ ಕೈಗೊಂಡಿದೆ.

ದೀಪಾವಳಿ ಹಬ್ಬದ ಸಮಯದಲ್ಲಿ ಜನದಟ್ಟಣೆಯನ್ನು ತಪ್ಪಿಸಲು ಹಾಗೂ ಮೈಸೂರಿನಿಂದ ಜೈಪುರಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗಿರುವುದರಿಂದ ತಾತ್ಕಾಲಿಕವಾಗಿ ಹೊಸ ರೈಲು ಪರಿಚಯಿಸಲು ರೈಲ್ವೆ ಇಲಾಖೆ ಕ್ರಮ ಕೈಗೊಂಡಿದೆ.

ಇದನ್ನು ಓದಿ: ಮ.ಬೆಟ್ಟ: ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ಸಿದ್ಧತೆ

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದ ಯದುವೀರ್, ಮೈಸೂರಿನಿಂದ ರಾಜಸ್ತಾನದ ಜೈಪುರಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗಿದೆ. ಜನದಟ್ಟಣೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚುವರಿ ರೈಲು ಸಂಚಾರಕ್ಕೆ ಅವಕಾಶ ಕಲ್ಪಿಸಬೇಕೆಂದು ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ಸ್ಪಂದಿಸಿರುವ ರೈಲ್ವೆ ಇಲಾಖೆಯು ಹಬ್ಬದ ಸಂದರ್ಭದಲ್ಲಿ ತಾತ್ಕಾಲಿಕವಾಗಿ ಹೆಚ್ಚುವರಿ ರೈಲು ಸಂಚಾರಕ್ಕೆ ಇಲಾಖೆ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.

ರಾಜಸ್ತಾನದ ಜನರು ಹಾಗೂ ಇತರರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದು ಸಂಸದ ಯದುವೀರ್‌ ಒಡೆಯರ್‌ ತಿಳಿಸಿದ್ದಾರೆ.

Tags:
error: Content is protected !!