Mysore
34
few clouds

Social Media

ಗುರುವಾರ, 09 ಏಪ್ರಿಲ 2026
Light
Dark

ಮೈಸೂರು-ಜೋಧ್‌ಪುರ ನಡುವೆ ವಿಶೇಷ ರೈಲು ಸೇವೆ ಆರಂಭ

ಮೈಸೂರು : ಮೈಸೂರು-ಜೋಧ್‌ಪುರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭವಾಗಿರುವುದಕ್ಕೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಡಾ. ಕೆ.ಬಿ.ಲಿಂಗರಾಜು ನೈಋತ್ಯ ರೈಲ್ವೆ ಮೈಸೂರು ವಿಭಾಗವನ್ನು ಅಭಿನಂದಿಸಿದ್ದಾರೆ.

ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್, ಮೈಸೂರು ನಗರದ ಬೆಳವಣಿಗೆಗೆ ಹಾಗೂ ಹೆಚ್ಚುವರಿ ಪ್ರಯಾಣಿಕರ ಸಂಚಾರ ದಟ್ಟಣೆ ನಿಯಂತ್ರಿಸಲು, ಮೈಸೂರು- ಜೋಧ್‌ಪುರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಆರಂಭಿಸಲು ಕೈಗೊಂಡಿರುವ ನಿರ್ಧಾರವನ್ನು ಸ್ವಾಗತಿಸಿರುವ ಅವರು, ಈ ಬಗ್ಗೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸದಸ್ಯರು ಹಲವಾರು ಬಾರಿ ಮನವಿ ಸಲ್ಲಿಸಿದ್ದರು. ವಲಯ ರೈಲ್ವೆ ಬಳಕೆದಾರರ ಹುಬ್ಬಳ್ಳಿ ಸಮಿತಿ ಸದಸ್ಯರಾಗಿರುವ ತಾವು ಸಭೆಯಲ್ಲಿ ಈ ವಿಷಯದ ಬಗ್ಗೆ ಪ್ರಧಾನ ವ್ಯವಸ್ಥಾಪಕರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದು, ಮನವಿಗೆ ಸ್ಪಂದಿಸಿ ರೈಲು ಸೇವೆ ಆರಂಭಿಸಿರುವುದಕ್ಕೆ ಧನ್ಯವಾಗಳನ್ನು ತಿಳಿಸುವುದಾಗಿ ಹೇಳಿದ್ದಾರೆ.

ಇದೇ ರೀತಿ ಮೈಸೂರು ನಗರದ ಅಭಿವೃದ್ಧಿ, ಬೆಳವಣಿಗೆಯ ನಿಟ್ಟಿನಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ಕೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ನೈಋತ್ಯ ರೈಲ್ವೆ ಅಧಿಕಾರಿಗಳೊಂದಿಗೆ ಕೈಜೋಡಿಸಲು ಉತ್ಸುಕವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏ.13, ಏ.20ಮತ್ತು 27ರಂದು ಮೈಸೂರಿನಿಂದ ವಿಶೇಷ ರೈಲು ಹೊರಡಲಿದೆ. ಅದೇ ರೀತಿ ಏ.16, ಏ.23 ಮತ್ತು ಏ.30 ಜೋಧಪುರದಿಂದ ಹೊರಡಲಿದೆ.

Tags:
error: Content is protected !!