ಮೈಸೂರು : ಮೈಸೂರು-ಜೋಧ್‌ಪುರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭವಾಗಿರುವುದಕ್ಕೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಡಾ. ಕೆ.ಬಿ.ಲಿಂಗರಾಜು ನೈಋತ್ಯ ರೈಲ್ವೆ ಮೈಸೂರು ವಿಭಾಗವನ್ನು ಅಭಿನಂದಿಸಿದ್ದಾರೆ.
ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್, ಮೈಸೂರು ನಗರದ ಬೆಳವಣಿಗೆಗೆ ಹಾಗೂ ಹೆಚ್ಚುವರಿ ಪ್ರಯಾಣಿಕರ ಸಂಚಾರ ದಟ್ಟಣೆ ನಿಯಂತ್ರಿಸಲು, ಮೈಸೂರು- ಜೋಧ್‌ಪುರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಆರಂಭಿಸಲು ಕೈಗೊಂಡಿರುವ ನಿರ್ಧಾರವನ್ನು ಸ್ವಾಗತಿಸಿರುವ ಅವರು, ಈ ಬಗ್ಗೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸದಸ್ಯರು ಹಲವಾರು ಬಾರಿ ಮನವಿ ಸಲ್ಲಿಸಿದ್ದರು. ವಲಯ ರೈಲ್ವೆ ಬಳಕೆದಾರರ ಹುಬ್ಬಳ್ಳಿ ಸಮಿತಿ ಸದಸ್ಯರಾಗಿರುವ ತಾವು ಸಭೆಯಲ್ಲಿ ಈ ವಿಷಯದ ಬಗ್ಗೆ ಪ್ರಧಾನ ವ್ಯವಸ್ಥಾಪಕರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದು, ಮನವಿಗೆ ಸ್ಪಂದಿಸಿ ರೈಲು ಸೇವೆ ಆರಂಭಿಸಿರುವುದಕ್ಕೆ ಧನ್ಯವಾಗಳನ್ನು ತಿಳಿಸುವುದಾಗಿ ಹೇಳಿದ್ದಾರೆ.
ಇದೇ ರೀತಿ ಮೈಸೂರು ನಗರದ ಅಭಿವೃದ್ಧಿ, ಬೆಳವಣಿಗೆಯ ನಿಟ್ಟಿನಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ಕೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ನೈಋತ್ಯ ರೈಲ್ವೆ ಅಧಿಕಾರಿಗಳೊಂದಿಗೆ ಕೈಜೋಡಿಸಲು ಉತ್ಸುಕವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏ.13, ಏ.20ಮತ್ತು 27ರಂದು ಮೈಸೂರಿನಿಂದ ವಿಶೇಷ ರೈಲು ಹೊರಡಲಿದೆ. ಅದೇ ರೀತಿ ಏ.16, ಏ.23 ಮತ್ತು ಏ.30 ಜೋಧಪುರದಿಂದ ಹೊರಡಲಿದೆ.
ಚಿಕ್ಕಮಗಳೂರು : ಜಿಲ್ಲೆಯ ದತ್ತಪೀಠದ ತಪ್ಪಲಿನ ಮಾಣಿಕ್ಯಾಧಾರಕ್ಕೆ ಕುಟುಂಬದ ಜೊತೆ ಬಂದಿದ್ದ 15 ವರ್ಷದ ಬಾಲಕಿ ಶ್ರೀನಂದಾ ಇದ್ದಕ್ಕಿದ್ದಂತೆ ಆ…
ದಾವಣಗೆರೆ : ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಸಾಕ್ಷಿಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…
ಬೆಂಗಳೂರು : ರಾಜ್ಯದ ಗಿರಿಶ್ರೇಣಿಗಳಿಗೆ ಬರುವ ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ದೇಶಕ್ಕೆ ಮಾದರಿಯಾಗುವಂತಹ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ರೂಪಿಸುವಂತೆ ಅರಣ್ಯ,…
ಕಲಬುರಗಿ : ದೇಶದಲ್ಲಿ ಅಡುಗೆ ಅನಿಲ, ಪೆಟ್ರೊಲ್ ಡಿಸೇಲ್ ಕೊರತೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್…
೨೦೨೫ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ನಂತರ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಯಶೀಲರಾಗಿ…
ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ನಡೆಸುತ್ತಿರುವುದರಿಂದ ಕೊಲ್ಲಿ ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಮೂಲಕ ಪೂರೈಕೆಯಾಗುತ್ತಿದ್ದ ಕಚ್ಚಾ ತೈಲ…