ಮೈಸೂರು

ದಸರಾ ಪ್ರಾಯೋಜಕತ್ವ ವಹಿಸಿಕೊಳ್ಳಿ, ನಿಮ್ಮ ವ್ಯಾಪಾರ ಉದ್ದಿಮೆಗಳ ಉದ್ದೀಪನಗೊಳಿಸಿಕೊಳ್ಳಿ – ಹೆಚ್.ಸಿ.ಎಂ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಸಂಭ್ರಮದಲ್ಲಿ ಪ್ರಾಯೋಜಕತ್ವ ನೀಡುವ ಮೂಲಕ ತಮ್ಮ ವ್ಯಾಪಾರ ವಹಿವಾಟುಗಳನ್ನು ವಿಸ್ತರಿಸಿಕೊಳ್ಳುವ ಸದಾವಕಾಶವನ್ನು ಸದುಪಯೋಗಿಸಿಕೊಳ್ಳಿ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಹೇಳಿದರು.

ನಗರದ ಲಲಿತ ಮಹಲ್ ಪ್ಯಾಲೇಸ್ ನಲ್ಲಿ ಬುಧುವಾರ ನಡೆದ ದಸರಾ ಪ್ರಾಯೋಜಕತ್ವದ ಸಭೆಯಲ್ಲಿ ಮಾತನಾಡಿದ ಅವರು, ದಸರಾ ಕಾರ್ಯಕ್ರಮಕ್ಕೆ ದೇಶ ವಿದೇಶಗಳಿಂದ ಸಾವಿರಾರು ಜನ ಆಗಮಿಸುತಿದ್ದು, ತಮ್ಮ ಉತ್ಪನ್ನಗಳ, ಕಂಪನಿ, ಕೈಗಾರಿಕೆಗಳನ್ನು, ಜನರ ಬಳಿ ಕೊಂಡೊಯ್ಯಲು ಉತ್ತಮ ವೇದಿಕೆ ಇದಾಗಿದೆ ಹಾಗೂ ವಿಜೃಂಭಣೆಯ ದಸರಾದಲ್ಲಿ ಪಾಲುದಾರರಾದ ಕೀರ್ತಿ ನಿಮ್ಮದಾಗಲಿದೆ ಎಂದರು.

ಪ್ರಾಯೋಜಕತ್ವದಲ್ಲಿ ಜಂಬೂಸವಾರಿ, ಅಂಬಾರಿ, ಪ್ಲಾಟಿನಂ, ಗೋಲ್ಡನ್, ಸಿಲ್ವರ್ ಎಂಬ ವಿಧಗಳಿದ್ದು ತಾವು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಅದಲ್ಲದೆ ವಿವಿಧ ಕಾರ್ಯಕ್ರಮಗಳಲ್ಲಿ ಸ್ಥಳಾವಕಾಶದ ಅವಕಾಶಗಳಿದ್ದು ಬಳಸಿಕೊಳ್ಳಿ , ಇದರಲ್ಲಿ ಯಾವುದೇ ಒತ್ತಾಯವಲ್ಲ, ಸ್ವಯಂಪ್ರೇರಿತವಾಗಿ ಮುಂದೆ ಬನ್ನಿ ಎಂದರು.

ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ಆಚರಣೆ ಮಾಡಲಾಗುತ್ತಿದೆ. ಪ್ರಜಾಪ್ರಭುತ್ವವನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಅಂದು ಬೀದರ್‌ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸಲಾಗುತ್ತಿದೆ. ಈ ಮಾನವ ಸರಪಳಿಯಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ ಎಂದು ಕರೆ ನೀಡಿದರು.

ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಮಾತನಾಡಿ, ತಾವು ಈ ಹಿಂದೆಯೂ ಸಂಪೂರ್ಣ ಸಹಕಾರ ನೀಡಿದ್ದೀರಿ, ಈ ಬಾರಿಯೂ ಸಹಕಾರ ಬಯಸುತ್ತೇವೆ. ತಮಗೆ ಅನುಕೂಲವಾಗುವಂತಹ ಪ್ರಾಯೋಜಕತ್ವವನ್ನು ತಾವು ಉಪಯೋಗಿಸಿಕೊಳ್ಳಬಹುದಾಗಿದ್ದು, ತಕ್ಷಣಕ್ಕೆ ತಿಳಿಸಲಾಗದಿದ್ದಲ್ಲಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಯೂ ತಿಳಿಸಬಹುದಾಗಿದೆ ಎಂದರು.

ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕರಾದ ಸವಿತ ಮಾತನಾಡಿ, ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆಗಳಲ್ಲಿ, ಪ್ರವೇಶ ದ್ವಾರಗಳಲ್ಲಿ, ವಿವಿಧ ಸ್ಟಾಲ್ ಗಳಲ್ಲಿ ಹಾಗೂ ಯುವ ದಸರ, ಯುವ ಸಂಭ್ರಮ, ಆಹಾರ ಮೇಳ, ಪ್ಲವರ್ ಶೋ, ಕುಸ್ತಿ ಇನ್ನು ಮುಂತಾದ ವೇದಿಕೆಗಳಲ್ಲಿ ತಮ್ಮ ಜಾಹೀರಾತುಗಳನ್ನು ಹಾಕುವ ಮೂಲಕ ಸದುಪಯೋಗಪಡಿಸಿಕೊಳ್ಳಿ ಎಂದರು.

ಜಂಬೂ ಸವಾರಿ ಪ್ರಾಯೋಜಕತ್ವದಲ್ಲಿ 2 ಕೋಟಿ, ಅಂಬಾರಿ ಪ್ರಾಯೋಜಕತ್ವದಲ್ಲಿ 1 ಕೋಟಿ, ಪ್ಲಾಟಿನಂ ಪ್ರಾಯೋಜಕತ್ವದಲ್ಲಿ 75 ಲಕ್ಷ, ಗೋಲ್ಡನ್ ಪ್ರಾಯೋಜಕತ್ವದಲ್ಲಿ 50 ಲಕ್ಷ, ಸಿಲ್ವರ್ ಪ್ರಾಯೋಜಕತ್ವದಲ್ಲಿ 25 ಲಕ್ಷ ಸ್ಪಾನ್ಸರ್ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಪೊಲೀಸ್ ಕಮಿಷನರ್ ಸೀಮಾಲಾಟ್ಕರ್, ಸಿಇಒ ಗಾಯತ್ರಿ ಕೆ.ಎಂ. ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ ಸೇರಿದಂತೆ ಉದ್ಯಮಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೇದಾರನಾಥ ಧಾಮದಲ್ಲಿ ಯಾತ್ರಾರ್ಥಿಗಳಿಗೆ 24 ಗಂಟೆ ಬಿಸಿನೀರು: ಸಿಎಂ ಪುಷ್ಕರ್‌ ಸಿಂಗ್‌ ಧಾಮಿ ಘೋಷಣೆ

ಡೆಹರಾಡೂನ್:‌ ಕೇದಾರನಾಥ ಧಾಮಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಶೀಘ್ರದಲ್ಲೇ ತಣ್ಣೀರಿನ ಬದಲಿಗೆ 24 ಗಂಟೆಗಳ ಬಿಸಿನೀರಿನ ಪೂರೈಕೆಯನ್ನು ಒದಗಿಸಲಾಗುವುದು ಎಂದು…

1 hour ago

ರಣ ಬಿಸಿಲ ನಡುವೆಯೇ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.…

1 hour ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಗೆ ಚಟ್ಟ ಕಟ್ಟಿದ ಪತ್ನಿ

ಸರಗೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ…

1 hour ago

ದೇವನೂರಿಗೆ ಆಗಮಿಸಿದ ಪಂಪ

ಅರ್ಧ ಶತಮಾನಕ್ಕೂ ಹಿಂದಿನ ಕಾಲದ ಚಿತ್ರಗಳು  ಓ.ಎಲ್.ನಾಗಭೂಷಣ ಸ್ವಾಮಿ ದೇವನೂರ ಮಹಾದೇವ ಕನ್ನಡಿಗರ ಮನಸಿನಲ್ಲಿ ಮನೆ ಮಾಡಿರುವವರು. ಒಬ್ಬೊಬ್ಬರೂ ಮಹಾದೇವರ…

2 hours ago

ದೇವನೂರಿಗೆ ಆಗಮಿಸಿದ ಪಂಪ

ದೇಮ ಎಂಬ ನೈತಿಕ ಕೈಮರ  ಸುರೇಶ ಕಂಜರ್ಪಣೆ ಅಂದಕಾಲತ್ತಿಲೇ ನಾನು ಅರಕಲಗೂಡಲ್ಲಿ ಪಾಠ ಮಾಡುತ್ತಿದ್ದಾಗ ಅಲ್ಲಿನ ದೇವಸ್ಥಾನದಲ್ಲಿ ಶಿವರಾತ್ರಿಯಂದು ನಡೆದ…

2 hours ago

ಚೆಕ್‌ಡ್ಯಾಂ ತಡೆಗೋಡೆ ಒಡೆದು ಹಾಕಿದ ಕಿಡಿಗೇಡಿಗಳು: ಕಠಿಣ ಕ್ರಮಕ್ಕೆ ಪ್ರಜ್ಞಾವಂತ ನಾಗರಿಕರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅಂತರ್ಜಲ ಮಟ್ಟ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಳೆಯ ನೀರು ಸಂಗ್ರಹಿಸಲು…

2 hours ago