ಮೈಸೂರು: ಗ್ರಾಮೀಣ ಪ್ರದೇಶ ಮಕ್ಕಳ ಪ್ರತಿಭೆ ಗುರುತಿಸಲು ಶಾಲಾ ಹಂತದ ಕ್ರೀಡಾ ಕೂಟ ಸಹಕಾರಿಯಾಗಿದೆ ಎಂದ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು.
ಅವರು ಇಂದು ಚಾಮುಂಡೇಶ್ವರಿ ಕ್ಷೇತ್ರದ ದೂರ ಗ್ರಾಮದಲ್ಲಿರುವ ಶ್ರೀ ಮಹದೇಶ್ವರ ವಿದ್ಯಾ ಸಂಸ್ಥೆಯಲ್ಲಿ ನಡೆದ ಜಯಪುರ ಹೋಬಳಿ ಮಟ್ಟದ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಕ್ರೀಡಾ ಕೂಟಗಳಿಂದ ವಿದ್ಯಾರ್ಥಿಗಳ ನಡುವೆ ಸಹೋದರ ಸಂಬಂಧ ಬೆಳೆಯಲಿವೆ. ಕ್ರೀಡೆಯ ಜತೆಗೆ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತುರೂಡಿಸಿಕೊಳ್ಳಬೇಕು. ಯಾವ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಬೆಳೆಸಿಕೊಳ್ಳುತ್ತಾನೋ ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗಿ ಹೊರಹೊಮ್ಮುತ್ತಾನೆ ಎಂದರು.
ಸಮಾರಂಭದಲ್ಲಿ ಬರಡನಪುರ ಮಠದ ಶ್ರೀ ಪರಶಿವಮೂರ್ತಿ ಸ್ವಾಮೀಜಿಗಳು ಅಧ್ಯಕ್ಷತೆ ವಹಿಸಿದ್ದರು.
ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಂ.ನಾಗರಾಜು, ವೀರಶೈವ ಮುಖಂಡರಾದ ಹಿನ್‌ಕಲ್ ಬಸವರಾಜು, ಮುಖಂಡರುಗಳಾದ ಎಂ.ಕುಮಾರ್, ನಂದೀಶ್ ಚಾಮುಂಡಯ್ಯ, ಲಾಯರ್ ಮಹೇಶ್ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…