Mysore
30
broken clouds

Social Media

ಸೋಮವಾರ, 10 ಆಗಸ್ಟ್ 2026
Light
Dark

ಕ್ರೀಡೆ ಆರೋಗ್ಯದ ಜೊತೆಗೆ ಮನಸ್ಸಿಗೆ ಉಲ್ಲಾಸ ನೀಡುತ್ತದೆ: ಸುನೀಲ್ ಬೋಸ್‌

ಚಾಮರಾಜನಗರ: ಕ್ರೀಡೆಗಳು ದೈಹಿಕ ಹಾಗು ಮಾನಸಿಕ ಆರೋಗ್ಯ ನೀಡುವ ಜೊತೆಗೆ ಮನಸ್ಸಿಗೆ ಉಲ್ಲಾಸ ಹಾಗೂ ಸಾಮರಸ್ಯದ ಸಂಕೇತವಾಗಿದೆ ಎಂದು ಕಾಂಗ್ರೆಸ್‌ ಯುವ ಮುಖಂಡ ಸುನೀಲ್ ಬೋಸ್ ತಿಳಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಭಗೀರಥ ಪ್ರೀಮಿಯರ್ ಲೀಗ್ -ಸೀಸನ್ ೨ನ ಎರಡನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಐಪಿಎಲ್ ಮಾದರಿಯಲ್ಲಿ ಭಗೀರಥ ಪ್ರೀಮಿಯರ್ ಲೀಗ್ ಪಂದ್ಯಾವಳಿಯನ್ನು ಆಯೋಜನೆ ಮಾಡುವ ಮೂಲಕ ಚಾಮರಾಜನಗರ ಯುವಕರು ಮಾದರಿಯಾಗಿದ್ದಾರೆ. ಮೂರು ದಿನಗಳ ಕಾಲ ನಡೆಯುವ ಕ್ರಿಕೆಟ್ ಹಬ್ಬವು ಎಲ್ಲರಿಗೂ ಸಂತೋಷನ್ನು ಉಂಟು ಮಾಡಲಿ ಎಂದರು.

ಕ್ರಿಕೆಟ್ ಪಂದ್ಯಾವಳಿಯು ಬಹಳ ಅಚ್ಚುಕಟ್ಟಾಗಿ ನಡೆಯುತ್ತಿದೆ. ಕ್ಯಾಮರಾ ಅಳವಡಿಕೆ ಹಾಗೂ ಮೂರನೇ ಅಂಪೈರ್ ಸುಸಜ್ಜಿತ ಕ್ರಿಡಾಂಗಣದಲ್ಲಿ ಪಂದ್ಯಾವಳಿ ನಡೆಯುತ್ತಿದೆ. ಸೋಲು ಗೆಲುವು ಮುಖ್ಯವಲ್ಲ. ಭಾಗವಹಿಸಿ, ಕ್ರೀಡಾ ಸ್ಪೂರ್ತಿಯನ್ನು ಮೆರೆಯುವಂತೆ ಸುನೀಲ್ ಬೋಸ್ ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎನ್. ಲೋಕೇಶ್, ಜಿ.ಪಂ. ಮಾಜಿ ಸದಸ್ಯ ನಂಜನಗೂಡಿನ ಕೆ.ಬಿ.ಸ್ವಾಮಿ, ಜಿ.ಪಂ. ಮಾಜಿ ಅಧ್ಯಕ್ಷ ಸಿ.ಎ.ಮಹದೇವಶೆಟ್ಟಿ, ಪರಿಸರ ಪ್ರೇಮಿ ವೆಂಕಟೇಶ್, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅನಂದ್ ಭಗೀರಥ್, ದ್ವಾರಕಿ ಬಸವಣ್ಣ, ಸಂಘದ ಅಧ್ಯಕ್ಷ ರಾಜೇಂದ್ರ, ಭರತ್ ಮೊದಲಾದವರು ಇದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!