ಮೈಸೂರು

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಮೈಸೂರಿನಲ್ಲಿ ಸ್ಥಳ ಮಹಜರು ನಡೆಸಿದ ಪೊಲೀಸರು

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ಠಾಣಾ ಪೊಲೀಸರು ಮೈಸೂರಿನ ಖಾಸಗಿ ಹೋಟೆಲ್‌ಗೆ ಕೊಲೆ ಪ್ರಕರಣದ ಆರೋಪಿಗಳನ್ನು ಕರೆತಂದು ಸ್ಥಳ ಮಹಜರು ನಡೆಸಿದರು.

ಆರೋಪಿಗಳಾದ ನಾಗರಾಜ್‌ ಅಲಿಯಾಸ್‌ ನಾಗ, ಲಕ್ಷ್ಮಣ್‌ ಅವರನ್ನು ಇಂದು ಬೆಂಗಳೂರಿನಿಂದ ಪೊಲೀಸ್‌ ವಾಹನದಲ್ಲಿ ಮೈಸೂರಿನ ಖಾಸಗಿ ಹೋಟೆಲ್‌ ರ್ಯಾಡಿಸನ್‌ ಬ್ಲೂಗೆ ಕರೆತಂದು ಸ್ಥಳ ಮಹಜರು ನಡೆಸಿದರು. ಹೋಟೆಲ್‌ನಲ್ಲಿ ದರ್ಶನ್‌ ತಂಗಿದ್ದ ರೂಂ, ಅಲ್ಲಿನ ಓಡಾಟ ಹಾಗೂ ಎಲ್ಲಾ ಮೂಲಮೂಲೆಗಳನ್ನು ಜಾಲಾಡಿರುವ ಪೊಲೀಸರು ಅಗತ್ಯ ದಾಖಲೆಗಳನ್ನು ಕಲೆಹಾಕಿದ್ದಾರೆ.

ಸುಮಾರು 2 ಗಂಟೆಗಳ ಕಾಲ ಸ್ಥಳ ಮಹಜರಿನ ಬಳಿಕ ಆರೋಪಿಗಳನ್ನು ಮತ್ತೆ ಬೆಂಗಳೂರಿಗೆ ವಾಪಸ್‌ ಕರೆದೊಯ್ದಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

2 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

3 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

4 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

4 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

9 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

10 hours ago