ಮೈಸೂರು: ಶ್ರೀ ಕೃಷ್ಣ ಟ್ರಸ್ಟ್ ವತಿಯಿಂದ ಆಗಸ್ಟ್ 27 ರಂದು ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಶ್ರೀ ಕೃಷ್ಣ ಲೀಲೋತ್ಸವ, ರಾಜ ಬೀದಿಗಳಲ್ಲಿ ಶ್ರೀ ಕೃಷ್ಣನ ಭವ್ಯ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ.
ಅಲ್ಲದೆ, ವಿಟ್ಲಪಿಂಡಿ ಮತ್ತು ಕರ್ನಾಟಕ ಮಹಿಳಾ ಯಕ್ಷಗಾನ ಕಲಾವಿದರಿಂದ ಶ್ರೀ ಕೃಷ್ಣ ಲೀಲೆ-ಕಂಸವಧೆ ಯಕ್ಷಗಾನ ಪ್ರದರ್ಶನವು ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣದಾಮದಲ್ಲಿ ಅಂದು ಸಂಜೆ 4:30ಕ್ಕೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷರಾದ ರವಿ ಶಾಸ್ತ್ರಿ ತಿಳಿಸಿದ್ದಾರೆ.