ಮೈಸೂರು

ಶ್ರಿನಿವಾಸ ಪ್ರಸಾದ್‌ ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿಲ್ಲ : ಶೈಲೇಂದ್ರ !

ಮೈಸೂರು : ಶ್ರೀನಿವಾಸ ಪ್ರಸಾದ್‌ ಅವರು ಯಾವುದೇ ಕಾರಣಕ್ಕು ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿಲ್ಲ ಎಂದು ನಗರ ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷ ವಿ.ಶೈಲೇಂದ್ರ  ಹೇಳಿದರು.

ನಗರ ಜಿಲ್ಲಾ ಎಸ್ ಸಿ ಮೋರ್ಚಾ ವತಿಯಿಂದ ಇಂದು ಪತ್ರಿಕಾ ಗೋಷ್ಠಿ ಕರೆಯಲಾಗಿದ್ದು ಈ ವೇಳೆ ಮಾತನಾಡಿದ ಅವರು,  ಸಂಸದರಾದ ವಿ ಶ್ರೀನಿವಾಸ್ ಪ್ರಸಾದ್ ರವರು ಬಿಜೆಪಿ ಸಂಸದರು, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗೆ ಬೆಂಬಲ ಸೂಚಿಸಿಲ್ಲ ಎಂದರು..

ಕಾಂಗ್ರೆಸ್ ನವರು ಮಾಡಿರುವ ದ್ರೋಹಕ್ಕೆ ಬೆಂಬಲ ಸೂಚಿಸಿಲ್ಲ ಹಾಗಾಗಿ ಅವರ ಅಭಿಮಾನಿ ಬಳಗ ಅಂತ ಹೇಳಿ ಅವರು ಹೇಳದಿರುವ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಾ ಶ್ರೀನಿವಾಸ್ ಪ್ರಸಾದ್ ರವರಿಗೆ ಅವಮಾನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮೈಸೂರು ನಗರ ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷ ವಿ.ಶೈಲೇಂದ್ರ ,ಮೈಸೂರು ನಗರ ಜಿಲ್ಲಾ ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಮರಿಯಪ್ಪ, ಸ್ವಾಮಿ,ಮಾಧ್ಯಮ ಮಹದೇವಸ್ವಾಮಿ ,ನಿಂಗರಾಜು ಉಪಸ್ಥಿತರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಸೋನಿಯಾ ಗಾಂಧಿ ಆರೋಗ್ಯ ಸ್ಥಿರ: ಇನ್ನೂ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ

ನವದೆಹಲಿ: ಜ್ವರ ಮತ್ತು ಸೋಂಕು ಹಿನ್ನೆಲೆಯಲ್ಲಿ ಸರ್‌ ಗಂಗಾ ರಾಮ್‌ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರ…

47 seconds ago

ಮಾರ್ಚ್.‌30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

ಬೆಂಗಳೂರು: ಮಾರ್ಚ್.‌30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾರ್ಚ್.‌31ಕ್ಕ ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಪರೀಕ್ಷಾ ಬೋರ್ಡ್‌ ಮಾಹಿತಿ ನೀಡಿದ್ದು,…

52 mins ago

1ನೇ ತರಗತಿ ಪ್ರವೇಶ: 6 ವರ್ಷ ಕಡ್ಡಾಯ ನಿಯಮದಲ್ಲಿ 60 ದಿನಗಳ ವಿನಾಯಿತಿ

ಬೆಂಗಳೂರು: ಆರು ವರ್ಷ ತುಂಬದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಂದನೇ ತರಗತಿಗೆ 6 ವರ್ಷ ತುಂಬಬೇಕೆಂಬ…

1 hour ago

ಬಜೆಟ್‌ ಕುರಿತು ನಡೆದ ಚರ್ಚೆಯ ಮೇಲಿನ ಉತ್ತರ ಪ್ರಮುಖ ಅಂಶಗಳಿವು.!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಕುರಿತು ನಡೆಸಿದ ಚರ್ಚೆಯ ಮೇಲಿನ ಉತ್ತರದ ಪ್ರಮುಖ ಅಂಶಗಳು ಈ ಕೆಳಕಂಡಂತಿವೆ.…

1 hour ago

ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಿಸಲು ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದ ವಾರಸುದಾರರಿಗೆ ಸರ್ಕಾರಿ ನೌಕರಿ ನೀಡಲು ಸರ್ಕಾರಿ ಆದೇಶದನ್ವಯ ಅವಕಾಶ ಇರುವುದಿಲ್ಲ ಎಂದು ಅರಣ್ಯ,…

2 hours ago

ಹಾರ್ಮುಜ್‌ ಜಲಸಂಧಿ ಮುಚ್ಚಲು ಕಾರಣರಾಗಿದ್ದ ಇರಾನ್‌ ನೌಕಾ ಕಮಾಂಡರ್‌ ಹತ್ಯೆ

ಜೆರುಸೇಲಂ: ಬಂದರ್‌ ಅಬ್ಬಾಸ್‌ನಲ್ಲಿ ಅಮೇರಿಕಾ-ಇಸ್ರೇಲಿ ದಾಳಿಯಲ್ಲಿ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್‌ ಕಾಪ್ಸ್‌ ನೌಕಾ ಕಮಾಂಡರ್‌ ಅಲಿರೆಜಾ ತಂಗ್‌ ಸಿರಿ ಮೃತಪಟ್ಟಿದ್ದಾರೆ.…

2 hours ago