ಮೈಸೂರು: ಮಾಜಿ ಸಚಿವ ಶ್ರೀರಾಮುಲು ಅವರು ಕಾಂಗ್ರೆಸ್ ಪಕ್ಷಕ್ಕೆ ಬರಲು ನಿರ್ಧರಿಸಿದರೆ ಸ್ವಾಗತ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿಂದು ಮಾತನಾಡಿದ ಅವರು, ಪಕ್ಷದ ಸಿದ್ಧಾಂತವನ್ನು ಒಪ್ಪುವ ಎಲ್ಲರಿಗೂ ಸ್ವಾಗತವಿದೆ. ಆದರೂ ಪಕ್ಷದ ಹೈಕಮಾಂಡ್, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ ಅವರು ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆಂದು ಹೇಳಿದರು.
ಸಂಸತ್ ಚುನಾವಣೆ ಸಮಯದಲ್ಲೇ ಶ್ರೀರಾಮುಲು ಕಾಂಗ್ರೆಸ್‌ಗೆ ಬರುತ್ತಾರೆಂದು ಚರ್ಚೆ ಆಗಿತ್ತು. ಆ ಸಮಯದಲ್ಲಿ ಅವರು ಬರಲಿಲ್ಲ. ಈಗ ಕಾಂಗ್ರೆಸ್‌ಗೆ ಬರುತ್ತಾರೋ, ಇಲ್ಲವೋ ಗೊತ್ತಿಲ್ಲ. ಒಮ್ಮೆ ಅವರು ಕಾಂಗ್ರೆಸ್‌ಗೆ ಬಂದರೆ ಸ್ವಾಗತ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್‌ಗೆ ಬೇರೆ ಬೇರೆ ಪಕ್ಷಗಳಿಂದ ಒಂದಷ್ಟು ಜನ ಶಾಸಕರು ಬರುತ್ತಾರೆಂದು ಹೇಳುತ್ತಿದ್ದಾರೆ. ಯಾರೇ ಬಂದರೂ ನಮಗೇನು ಬೇಜಾರಿಲ್ಲ. ನಮ್ಮ ಪಕ್ಷಕ್ಕೆ ಬರುತ್ತೇವೆ ಎನ್ನುವವರಿಗೆ ಮೊದಲು ಸಿಎಂ, ಕೆಪಿಸಿಸಿ ಅಧ್ಯಕ್ಷರ ಬಳಿ ಮಾತನಾಡಬೇಕು ಎಂದು ಹೇಳಿದ್ದೇವೆಂದು ಹೇಳಿದರು.
ಮೈಸೂರು: ಕಿಡಿಗೇಡಿಗಳು ಬೆಂಕಿ ಹಚ್ಚಿದ ಕೃತ್ಯಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಕೆಲವು ಪ್ರದೇಶ ಹೊತ್ತಿಉರಿದಿದ್ದು,ಕೆಲಕಾಲ ಆತಂಕ ನಿರ್ಮಾಣವಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ರಿಂಗ್…
ಮೈಸೂರು : ನಗರದ ಅಪೋಲೋ ಬಿಜಿಎಸ್ ಆಸ್ಪತ್ರೆಯು ಮೈಸೂರಿನಲ್ಲಿ ಮೊದಲ ಸಮಗ್ರ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಆರಂಭಿಸಿದೆ. ಇದು ಈ ವ್ಯಾಪ್ತಿಯಲ್ಲಿ…
ಬೆಂಗಳೂರು : ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ…
ಬಾಗಲಕೋಟೆ : 2025-26ರ ಬಜೆಟ್ ನಲ್ಲಿ ಮಾಡಿದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವವಕ್ಕೆ ಚಾಲನೇ ನೀಡಲು…
ಹೊಸದಿಲ್ಲಿ : ನಿರೀಕ್ಷೆಯಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರ ಮೂಲದ ನಿತಿನ್ ನಬಿನ್ ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ…
ಬೆಂಗಳೂರು : ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ಡಿಜಿಪಿ ರಾವ್ ಅವರು ಹತ್ತು…