ಮೈಸೂರು

ಮುಖ್ಯಮಂತ್ರಿ ವಿರುದ್ಧ ಚಾರ್ಜ್‌ಶೀಟ್‌ ಹಾಕುವ ಎದೆಗಾರಿಕೆ ಲೋಕಾಯುಕ್ತಕ್ಕೆ ಇಲ್ಲ: ಶ್ರೀವತ್ಸ

ಮೈಸೂರು: ಲೋಕಾಯುಕ್ತ ಅಧಿಕಾರಿಗಳು ಎಷ್ಟೇ ಸಮರ್ಥರಿದ್ದರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿಯನ್ನು ಎದುರಿಸಿಕೊಂಡು ಪ್ರಶ್ನಿಸಿ ಅವರ ವಿರುದ್ಧವೇ ಚಾರ್ಜ್‌ ಶೀಟ್‌ ಹಾಕುವಷ್ಟು ಎದೆಗಾರಿಕೆ ಲೋಕಾಯುಕ್ತಕ್ಕೆ ಇದೆ ಎಂಬಂತೆ ಅನ್ನಿಸಿಲ್ಲ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು(ಜನವರಿ.24) ಮುಡಾ ಪ್ರಕರಣದ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ವರದಿ ಸಲ್ಲಿಸುವ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಹಗರಣದಲ್ಲಿ ಮುಖ್ಯಮುಂತ್ರಿಗಳ ಮೇಲೆ ದೋಷಾರೋಪ ಮಾಡಿ ಚಾರ್ಜ್‌ ಶೀಟ್‌ ಅನ್ನು ಲೋಕಾಯುಕ್ತದವರು ಹಾಕುತ್ತಾರೆಂದು ಅನ್ನಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ಅಧೀನ ಸಂಸ್ಥೆಯನ್ನು ಬಿಟ್ಟು, ಸಿಬಿಐ ತನಿಖೆಗೆ ಮುಡಾ ಹಗರಣವನ್ನು ವಹಿಸಬೇಕೆಂದು ಒತ್ತಾಯಿಸಿದ್ದೇವು ಎಂದರು.

ಲೋಕಾಯುಕ್ತ ಅಧಿಕಾರಿಗಳು ಅಪ್ಪಿತಪ್ಪಿ ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿ ರಿಪೋರ್ಟ್‌ ನೀಡಿದ್ದರೆ, ಮೈಸೂರು ಲೋಕಾಯುಕ್ತ ಸಂಸ್ಥೆಯ ಮೇಲೆ ಗೌರವ ಉಳಿಯುವುದಿಲ್ಲ. ಅಲ್ಲದೇ ಈ ವಿಚಾರದಲ್ಲಿ ನ್ಯಾಯಮೂರ್ತಿಗಳೇ ಕೆಲವು ಫೈಡಿಂಗ್‌ ಮಾಡಿಕೊಂಡಿರುವುದರಿಂದ ಅದನ್ನು ಕೋರ್ಟ್‌ನಲ್ಲಿ ನ್ಯಾಯಾಧೀಶರು ನೋಡಿಕೊಳ್ಳುತ್ತಾರೆ. ಜೊತೆಗೆ ಲೋಕಾಯುಕ್ತ ಸಂಸ್ಥೆಯ ಮೇಲೆ ಸಾರ್ವಜನಿಕರು ನಂಬಿಕೆ ಕಳೆದುಕೊಳ್ಳುತ್ತಾರೆ. ಹೀಗಾಗಿ ಲೋಕಾಯುಕ್ತ ಅಧಿಕಾರಿಗಳು ನ್ಯಾಯಯುತವಾಗಿ ತನಿಖೆ ನಡೆಸಿ ವರದಿ ಸಲ್ಲಿಸುತ್ತಾರೆಂಬ ವಿಶ್ವಾಸವಿದೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

1 second ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

1 hour ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

2 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

2 hours ago

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ : ಜನ್ಮದಿನ, ವಿವಾಹ ವಾರ್ಷಿಕೋತ್ಸವಕ್ಕೂ ರಜೆ

ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…

3 hours ago

ಭಾರತ-ಕೆನಡಾ ನಡುವೆ ಎಲೆಕ್ಟ್ರಿಕ್ ವಾಹನ ಒಪ್ಪಂದ : ಎಚ್‌ಡಿಕೆ ನೇತೃತ್ವದಲ್ಲಿ ದ್ವಿಪಕ್ಷೀಯ ಚರ್ಚೆ

ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…

3 hours ago