Mysore
17
broken clouds

Social Media

ಶುಕ್ರವಾರ, 06 ಫೆಬ್ರವರಿ 2026
Light
Dark

ಮಾರ್ಚ್.‌21 ರಿಂದ ಎಸ್ಎಸ್ಎಲ್‌ಸಿ‌ ಪರೀಕ್ಷೆ: ಜಿಲ್ಲೆಯಾದ್ಯಂತ ಭರದ ಸಿದ್ದತೆ

ಮೈಸೂರು: ಇದೇ ಮಾರ್ಚ್.‌21 ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ಜಿಲ್ಲಾಡಳಿತವೂ ಮೈಸೂರು ಜಿಲ್ಲೆಯಾದ್ಯಂತ ಸುಗಮವಾಗಿ ಪರೀಕ್ಷೆ ನಡೆಸಲು ಭರದ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಟಿ ಜವರೇಗೌಡ ತಿಳಿಸಿದರು.

ನಗರದ ಡಿಡಿಪಿಐ ಆಫೀಸ್‌ನಲ್ಲಿ ಇಂದು(ಮಾರ್ಚ್‌.18) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಜಿಲ್ಲೆಯಲ್ಲಿ ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ದಿನಗಣನೆ ಆರಂಭವಾಗಿದ್ದು, ಮಾರ್ಚ್‌.21 ರಿಂದ ಏಪ್ರಿಲ್.4 ರವರೆಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಇನ್ನು ಜಿಲ್ಲೆಯಾದ್ಯಂತ 133 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಹೇಳಿದರು.

ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 39103 ವಿದ್ಯಾರ್ಥಿಗಳು ಬರೆಯುತ್ತಿದ್ದಾರೆ. ಅದರಲ್ಲಿ ವಿದ್ಯಾರ್ಥಿ 19,114 ಇದ್ದರೆ, ವಿದ್ಯಾರ್ಥಿನಿಯರು 18,970 ಮಂದಿ ಇದ್ದಾರೆ. ಆದರೆ ಪರೀಕ್ಷಾ ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್ ಕಣ್ಗಾವಲು ಇರಲಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇನ್ನು ಬೇಸಿಗೆ ಹಿನ್ನಲೆ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದರು.

 

Tags:
error: Content is protected !!