ಮೈಸೂರು: ಇದೇ ಮಾರ್ಚ್.21 ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ಜಿಲ್ಲಾಡಳಿತವೂ ಮೈಸೂರು ಜಿಲ್ಲೆಯಾದ್ಯಂತ ಸುಗಮವಾಗಿ ಪರೀಕ್ಷೆ ನಡೆಸಲು ಭರದ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಟಿ ಜವರೇಗೌಡ ತಿಳಿಸಿದರು.
ನಗರದ ಡಿಡಿಪಿಐ ಆಫೀಸ್‌ನಲ್ಲಿ ಇಂದು(ಮಾರ್ಚ್.18) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಜಿಲ್ಲೆಯಲ್ಲಿ ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ದಿನಗಣನೆ ಆರಂಭವಾಗಿದ್ದು, ಮಾರ್ಚ್.21 ರಿಂದ ಏಪ್ರಿಲ್.4 ರವರೆಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಇನ್ನು ಜಿಲ್ಲೆಯಾದ್ಯಂತ 133 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಹೇಳಿದರು.
ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 39103 ವಿದ್ಯಾರ್ಥಿಗಳು ಬರೆಯುತ್ತಿದ್ದಾರೆ. ಅದರಲ್ಲಿ ವಿದ್ಯಾರ್ಥಿ 19,114 ಇದ್ದರೆ, ವಿದ್ಯಾರ್ಥಿನಿಯರು 18,970 ಮಂದಿ ಇದ್ದಾರೆ. ಆದರೆ ಪರೀಕ್ಷಾ ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್ ಕಣ್ಗಾವಲು ಇರಲಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಇನ್ನು ಬೇಸಿಗೆ ಹಿನ್ನಲೆ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದರು.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…