ಮೈಸೂರು: ಜಿಲ್ಲೆಯಾದ್ಯಾಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶುಭ ಹಾರೈಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲಿರುವ ನನ್ನೆಲ್ಲಾ ಪ್ರಿಯ ವಿದ್ಯಾರ್ಥಿಗಳಿಗೆ ಶುಭ ಹಾರೈಕೆಗಳು ಎಂದಿದ್ದಾರೆ.
ಇನ್ನು ವಿದ್ಯಾರ್ಥಿಗಳಾಗಿರುವ ನೀವು ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ. ಯಶಸ್ಸು ನಿಮ್ಮದಾಗಲಿ, ನಿಮ್ಮೆಲ್ಲರಿಗೂ ತಾಯಿ ಶ್ರೀ ಚಾಮುಂಡೇಶ್ವರಿ ಸನ್ಮಂಗಳವನ್ನುಂಟು ಮಾಡಲಿ.





