ಮೈಸೂರು

SSLC ಪಾಸ್‌ ಆದವರಿಗೆ ಡಿಪ್ಲೋಮಾ ಕೋರ್ಸ್‌ಗಳ ಅರ್ಜಿ ಆಹ್ವಾನ

ಮೈಸೂರು: 2024-25 ನೇ ಸಾಲಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮೊ ಪ್ರವೇಶಕ್ಕಾಗಿ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿಯನ್ನು ಪ್ರಾರಂಭ ಮಾಡಲಾಗಿದ್ದು, ಎಸ್.ಎಸ್.ಎಲ್.ಸಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ ಪಾಸಾದ ಅಭ್ಯರ್ಥಿಗಳಿಗೆ ಡಿಪ್ಲೋಮೊ ಇನ್ ಟೂಲ್ ಅಂಡ್ ಡೈ ಮೇಕಿಂಗ್, ಡಿಪ್ಲೋಮೊ ಇನ್ ಪ್ರಿಶಿಷನ್ ಮ್ಯಾನುಫ್ಯಾಕ್ಚರಿಂಗ್, ಡಿಪ್ಲೋಮೊ ಇನ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಕೋರ್ಸ್ಗಳು ಲಭ್ಯವಿದ್ದು, 3 ವರ್ಷ ಹಾಗೂ ಕಡ್ಡಾಯ ಒಂದು ವರ್ಷದ ಇಂಟರ್ನ್ಶಿಪ್ ತರಬೇತಿಯನ್ನು ನೀಡಲಾಗುವುದು. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಬೆಳಗೋಳ ಕೈಗಾರಿಕಾ ಪ್ರದೇಶದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ದೂ.ಸಂ: 821-2582750 ಹಾಗೂ ಸಹಾಯವಾಣಿ:155267, ಮೊ.ನಂ:9980557205, 8660139259, 9141630315, 9880068986 ಅಥವಾ ವೆಬ್‌ಸೈಟ್ https://gttc.karnataka.gov.in ಹಾಗೂ http://cetonline.karnataka.gov.in/kea ನ್ನು ಸಂರ್ಕಿಸಬಹುದು ಎಂದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸರ್ಕಾರ ನಡೆಸಲು ಆಗದಿದ್ದರೆ ವಿಸರ್ಜಿಸಿ ಚುನಾವಣೆಗೆ ಬನ್ನಿ : ಕಾಂಗ್ರೆಸ್‌ಗೆ ವಿಜಯೇಂದ್ರ ಸವಾಲು

ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…

9 hours ago

ಪಾದಯಾತ್ರೆ ಮಧ್ಯೆ ದಲಿತ ಮುಖಂಡರ ಜೊತೆ ಸಭೆ ನಡೆಸಿದ ಬಿ.ವೈ. ವಿಜಯೇಂದ್ರ

ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…

9 hours ago

ಕೆ.ಆರ್.ಪೇಟೆ | ಕುಡಿಯುವ ನೀರಿನ ಸಮಸ್ಯೆ ಪರಿಶೀಲಿಸಿದ ಜಿಲ್ಲಾಧಿಕಾರಿ ಮತ್ತು ಸಿಇಒ

ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…

9 hours ago

ಮೈಸೂರು | ಮಾನಸಗಂಗೋತ್ರಿಯಲ್ಲಿ ಜಾನಪದ ಝೇಂಕಾರ

ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…

10 hours ago

ಬುಟಕಟ್ಟು ಕುಟುಂಬಗಳಿಗೆ ಶೀಘ್ರದಲ್ಲೇ ಪೌಷ್ಟಿಕ ಆಹಾರದ ಕಿಟ್ ವಿತರಣೆ

ಎಂಎಲ್‌ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…

10 hours ago

ಅಕ್ರಮ ದಾಸ್ತಾನುಗಳ ಮೇಲೆ ಜಂಟಿ ದಾಳಿ ಮಾಡಿ : ಸಚಿವ ರಿಜ್ವಾನ್‌ ಅರ್ಷದ್‌

ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…

11 hours ago