Mysore
29
clear sky

Social Media

ಸೋಮವಾರ, 06 ಏಪ್ರಿಲ 2026
Light
Dark

ಮೈಸೂರು| ಹೃದಯಾಘಾತದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಸಾವು

ಮೈಸೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕೆಲ್ಲೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಾಗರಾಜು ಹಾಗೂ ವಸಂತ ಎಂಬುವವರ ಪುತ್ರಿ ದೀಪಿಕಾ (15) ಸಾವನ್ನಪ್ಪಿರುವ ಯುವತಿಯಾಗಿದ್ದಾಳೆ.

ರಾವಂದೂರು ಗ್ರಾಮದ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದ ದೀಪಿಕಾ ಇದ್ದಕ್ಕಿದ್ದಂತೆ ತೀವ್ರ ಅಸ್ವಸ್ಥಳಾಗಿದ್ದಳು.

ತಕ್ಷಣವೇ ದೀಪಿಕಾಳನ್ನು ಆಸ್ಪತ್ರೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗಮಧ್ಯೆಯೇ ದೀಪಿಕಾ ಕೊನೆಯುಸಿರೆಳೆದಿದ್ದಾಳೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

Tags:
error: Content is protected !!