ಮೈಸೂರು

ಕಾಲ್ತುಳಿತ ಅವಘಡ | ಬಿಜೆಪಿ ʻಎಕ್ಸ್‌ʼ ಪೋಸ್ಟ್‌ ಪ್ರದರ್ಶಿಸಿದ ಸಿಎಂ

ಮೈಸೂರು : ಆರ್‌ಸಿಬಿ ವಿಜಯೋತ್ಸವದ ರೋಡ್‌ ಶೋಗೆ ಸರ್ಕಾರ ಅನುಮತಿ ನಿರಾಕರಿಸಿತ್ತು. ಆಗ ಇದೇ ಬಿಜೆಪಿ ನಾಯಕರು ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್‌ ಅನ್ನು ಪ್ರದರ್ಶಿಸಿದರು.

ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಭಾನುವಾರ ಸಂಜೆ ಮೈಸೂರಿಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಆರ್‌ಸಿಬಿ ಕಾಲ್ತುಳಿತದಂತಹ ಪ್ರಕರಣ ಜರುಗಬಾರದಿತ್ತು. ನಾನು ಮುಖ್ಯಮಂತ್ರಿ ಆದಾಗಿನಿಂದ ಯಾವತ್ತೂ ಇಂತಹ ಪ್ರಕರಣ ಆಗಿರಲಿಲ್ಲ. ಈಗ ಆಗಿರುವುದು ನೋವಾಗಿದೆ. ಕೇವಲ ನನಗೆ ಮಾತ್ರವಲ್ಲ ಎಲ್ಲರಿಗೂ ನೋವಾಗಿದೆ. ಇದರಲ್ಲಿ ನಾವೇನು ತಪ್ಪು ಮಾಡಿಲ್ಲ. ಇದೀಗ ಬಿಜೆಪಿಯವರು ಪ್ರಕರಣಕ್ಕೆ ಬೇರೆ ಬಣ್ಣ ಹಚ್ಚುವ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ಆರ್‌ಸಿಬಿ ರೋಡ್ ಶೋಗೆ ಅನುಮತಿ ನಿರಾಕರಿಸಲಾಗಿತ್ತು. ಆಗ ಇದೇ ಬಿಜೆಪಿ ಮಂದಿ ರೋಡ್ ಶೋಗೆ ಅನುಮತಿ ನೀಡದ ಗೃಹ ಸಚಿವರನ್ನು ಅಸಮರ್ಥ ಎಂದು ಕರೆದಿದ್ದರು ಎಂದು ಅಂದು ಬಿಜೆಪಿ ನಾಯಕರು ಮಾಡಿದ್ದ ಟ್ವಿಟ್‌ ಮಾಡಿದ್ದನ್ನು ಪ್ರದರ್ಶಿಸಿದರು.

ಆಂದೋಲನ ಡೆಸ್ಕ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

5 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

5 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

5 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

5 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

6 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago