ಮೈಸೂರು

ರಾಜ್ಯ ಅಯವ್ಯಯ 2023-24 : ಸಿಎಂ ತವರು ಜಿಲ್ಲೆಗೆ ಸಿಕ್ಕ ಕೊಡುಗೆ ಏನು ?

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ತವರು ಜಿಲ್ಲೆಗೆ ಮೈಸೂರಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ.

ಶುಕ್ರವಾರ ಬಜೆಟ್‌ ಮಂಡಿಸಿದ ಸಿಎಂ, ವಿಶೇಷ ಕಂಪು, ರುಚಿ ಮತ್ತು ಸೊಗಡಿನಿಂದ ಜನಮನದಲ್ಲಿ ನೆಲೆಸಿರುವ ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆಗಳು GI Tag ಗಳನ್ನು ಪಡೆದಿವೆ. ಇವುಗಳ ಉತ್ಪಾದನೆ, ಸಂಶೋಧನೆ, ಮಾರುಕಟ್ಟೆ ಮತ್ತು ಬ್ರ್ಯಾಂಡಿಂಗ್‌ ಉತ್ತೇಜಿಸಲು ನೂತನ ಕಾರ್ಯಕ್ರಮಗಳನ್ನ ರೂಪಿಸುವುದಾಗಿ ಘೋಷಣೆ ಮಾಡಿದ್ದಾರೆ.

ಅಲ್ಲದೇ, ಮೈಸೂರು ಬಿತ್ತನೆ ಪ್ರದೇಶದಲ್ಲಿ ಮೂಲಭೂತ ಸೌಕರ್ಯ ಬಲಪಡಿಸಲಾಗುವುದು. ಇದರಿಂದ ಉತ್ತಮ ಗುಣಮಟ್ಟದ ರೋಗರಹಿತವಾದ ಮೈಸೂರು ಬಿತ್ತನೆ ಗೂಡುಗಳನ್ನು ಉತ್ಪಾದಿಸಿ, ವಾಣಿಜ್ಯ ರೇಷ್ಮೆ ಬೆಳೆಗಾರರಿಗೆ ವಿತರಿಸಲು ಮತ್ತು ಉತ್ತಮ ಗುಣಮಟ್ಟದ ಮಿಶ್ರತಳಿ ಕಚ್ಚಾ ರೇಷ್ಮೆಯನ್ನು ಉತ್ಪಾದಿಸಲು ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ತವರಿಗೆ ಸಿಎಂ ಕೊಟ್ಟ ಕೊಡುಗೆ

1.ಮೈಸೂರು ರಾಜ್ಯ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮಗಳ ಆಯೋಜನೆ.

2.ಮೈಸೂರಿನ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಆವರಣವನ್ನು ಮೇಲ್ದರ್ಜೆಗೇರಿಸಲು ಕ್ರಮ.

3.ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದ ಬಳಿ ಎಆರ್ ಮತ್ತು ವಿಆರ್ ತಂತ್ರಜ್ಞಾನದೊಂದಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಕರ್ನಾಟಕ ಪುರಾತತ್ವ ವಸ್ತುಸಂಗ್ರಹಾಲಯ ಮತ್ತು ಕಲಾಗ್ಯಾಲರಿ ನಿರ್ಮಾಣ.

4.ಮಾನವ – ವನ್ಯಪ್ರಾಣಿ ಸಂಘರ್ಷದಲ್ಲಿ ಸಂರಕ್ಷಿಸಿದ, ಗಾಯಗೊಂಡ ಅನಾರೋಗ್ಯಪೀಡಿತ ಪ್ರಾಣಿಗಳ ರಕ್ಷಣೆ/ನಿರ್ವಹಣೆಗಾಗಿ ಬನ್ನೇರುಘಟ್ಟ ಮತ್ತು ಮೈಸೂರಿನಲ್ಲಿರುವ ಪುನರ್ವಸತಿ ಕೇಂದ್ರಗಳ ಸಾಮರ್ಥ್ಯ ವರ್ಧನೆ ಹಾಗೂ ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಕೇಂದ್ರಗಳ ನಿರ್ಮಾಣ.

5.ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಸ್ಥಾನ ಹಾಗೂ ಚಾಮುಂಡಿಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕ್ರಮ.

6.ಮೈಸೂರು ಜಿಲ್ಲೆಯಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ನಿರ್ಮಾಣ.

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago