Mysore
16
scattered clouds

Social Media

ಬುಧವಾರ, 17 ಡಿಸೆಂಬರ್ 2025
Light
Dark

ಸೆ.22 ಸೆ.25ರವರೆಗೆ ರಾಜ್ಯಮಟ್ಟದ ದಸರಾ ಕ್ರೀಡಾಕೂಟ

Mysuru Dasara 2025 | Formation of Dasara Sub-Committees, Responsibilities Assigned to Officials

ಮೈಸೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26ನೇ ಸಾಲಿನ ದಸರಾ ಕ್ರೀಡಾಕೂಟ ಸ್ಪರ್ಧೆಗಳನ್ನು ಪುರುಷರು ಮತ್ತು ಮಹಿಳೆಯರಿಗಾಗಿ ತಾಲೂಕು, ಜಿಲ್ಲಾ ಮಟ್ಟದ ಸ್ಪರ್ಧೆಗಳನ್ನು ನಡೆಸಲಿದ್ದು, ರಾಜ್ಯ ಮಟ್ಟದ ಸ್ಪರ್ಧೆ ಸೆ.22 ರಿಂದ ಸೆ.25ರವರೆಗೆ ಆಯೋಜಿಸಲು ನಿರ್ಧರಿಸಲಾಗಿದೆ.

ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆಸಲಾಗುವ ಕ್ರೀಡಾಕೂಟವನ್ನು ಬೆಂಗಳೂರು ನಗರ ವಿಭಾಗ, ಬೆಂಗಳೂರು ಗ್ರಾಮಾಂತರ ವಿಭಾಗ, ಮೈಸೂರು ವಿಭಾಗ, ಕಲ್ಬುರ್ಗಿ ವಿಭಾಗ, ಬೆಳಗಾವಿ ವಿಭಾಗ ಎಂಬ 5 ವಿಭಾಗಗಳಾಗಿ ವಿಂಗಡಿಸಿ ಕ್ರೀಡೆ ನಡೆಸಲಾಗುತ್ತದೆ. ವಿಭಾಗ ಮಟ್ಟದಲ್ಲಿ ಸ್ಪರ್ಧಿಸುವ ಕ್ರೀಡಾಪಟುಗಳ ಫಲಿತಾಂಶವನ್ನು ಮೈಸೂರು ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಬೆಂಗಳೂರು ಕೇಂದ್ರ ಕಚೇರಿ ಆಯುಕ್ತರಿಗೆ ಸೆ.15ರ ಒಳಗಾಗಿ ಇಲಾಖೆ ನೀಡಲಿರುವ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಲಾಗುವುದು.

ತಾಲೂಕು ಮಟ್ಟದ ದಸರಾ ಕ್ರೀಡಾ ಸ್ಪರ್ಧೆಗಳನ್ನು ಆ.28ರೊಳಗಾಗಿ, ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ಸೆ.01ರೊಳಗೆ, ವಿಭಾಗ ಮಟ್ಟದ ಕ್ರೀಡಾ ಸ್ಪರ್ಧೆಯನ್ನು ಸೆ.10ರೊಳಗಾಗಿ ನೆಡಸಲಾಗುವುದು. ಕ್ರೀಡಾಕೂಟದಲ್ಲಿ ಮಹಿಳೆ ಮತ್ತು ಪುರುಷರಿಗಾಗಿ ಅಥ್ಲೆಟಿಕ್ ಸ್ಪರ್ಧೆ, ಈಜು, ವಿವಿಧ ಯೋಗ ಆಸನಗಳು, ವಿಭಾಗ ಮಟ್ಟದಲ್ಲಿ ಸ್ಪರ್ಧಿಸುವ ಕ್ರೀಡಾಪಟುಗಳ ಫಲಿತಾಂಶವನ್ನು ಮೈಸೂರು ಜಿಲ್ಲೆಯ ಯುವ ಸಬಲೀ ಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಬೆಂಗಳೂರು ಕೇಂದ್ರ ಕಚೇರಿ ಆಯುಕ್ತರಿಗೆ ಸೆ.೧೫ರೊಒಳಗಾಗಿ ಇಲಾಖೆ ನೀಡಲಿರುವ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ.

ತಾಲ್ಲೂಕು ಮಟ್ಟದ ದಸರಾ ಕ್ರೀಡಾ ಸ್ಪರ್ಧೆಗಳನ್ನು ಆ.28ರೊಳಗಾಗಿ, ಜಿಲ್ಲಾಮಟ್ಟದ ಸ್ಪರ್ಧೆಯನ್ನು ಸೆ.೧ರೊಳಗೆ, ವಿಭಾಗ ಮಟ್ಟದ ಕ್ರೀಡಾ ಸ್ಪರ್ಧೆಯನ್ನು ಸೆ.೧೦ರೊಳಗಾಗಿ ನಡೆಸಲಾಗುವುದು. ಕ್ರೀಡಾಕೂಟ ದಲ್ಲಿ ಮಹಿಳೆ ಮತ್ತು ಪುರುಷರಿಗಾಗಿ ಅಥ್ಲೆಟಿಕ್ಸ್ ಸ್ಪರ್ಧೆ, ಈಜು, ವಿವಿಧ ಯೋಗಾಸನಗಳು, ಕಬಡ್ಡಿ, ವಾಲಿಬಾಲ್, ಬಾಸ್ಕೆಟ್‌ಬಾಲ್, ಕುಸ್ತಿ, ಫುಟ್‌ಬಾಲ್, ಖೋಖೋ, ಹಾಕಿ, ಬ್ಯಾಡ್ಮಿಂಟನ್ ಸೇರಿದಂತೆ ಇನ್ನೂ ಹಲವು ಕ್ರೀಡೆಗಳನ್ನು ಆಯೋಜಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಎಲ್ಲಾ ಜಿಲ್ಲೆಗಳ ಜಿಲ್ಲಾ ಅಧಿಕಾರಿಗಳು, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಬೆಂಗಳೂರು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಹಾಗೂ ಬೆಂಗಳೂರು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಹಾ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ.

Tags:
error: Content is protected !!