ಮೈಸೂರು: ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಆಯುಷ್ ವೈದ್ಯಕೀಯ ಸೇವೆ ದೊರಕಿಸಲು ಕ್ರಮ ವಹಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ನಗರದಲ್ಲಿ ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್(ಎನ್‌ಐಎಂಎ) ಬುಧವಾರ ಆಯೋಜಿಸಿದ್ದ ‘ಆಯುರ್ ವೈದ್ಯ ಸಮ್ಮೇಳನ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಕೀಯ ಅಧಿಕಾರಿಗಳ ಉಸ್ತುವಾರಿಯಲ್ಲಿ ಆಯುಷ್ ವೈದ್ಯರು ಕರ್ತವ್ಯ ನಿರ್ವ ಹಿಸಲಿದ್ದಾರೆ. ಈ ಬಗ್ಗೆ ಶೀಘ್ರ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು. ಎಲ್ಲ ಮಾದರಿಯ ವೈದ್ಯಕೀಯ ಸೇವೆಗಳು ದೊರೆಯಲಿವೆ ಎಂದರು.
ತಾಲ್ಲೂಕು ಆಸ್ಪತ್ರೆಗಳಲ್ಲಿ 5ರಿಂದ 10 ಹಾಸಿಗೆ ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ 20 ಹಾಸಿಗೆ ಸಾಮರ್ಥ್ಯದಲ್ಲಿ ಈ ಸೇವೆ ದೊರಕಿಸಲು ವೈದ್ಯರನ್ನೂ ನಿಯೋಜಿಸಲಾಗುವುದು ಎಂದು ತಿಳಿಸಿದರು.
ಆರೋಗ್ಯ ಇಲಾಖೆಯ ನೌಕರರ ವರ್ಗಾವಣೆಯನ್ನು ಕೌನ್ಸಿಲಿಂಗ್ ನಡೆಸಿಯೇ ಮಾಡಲಾಗುವುದು. ಹಸ್ತಕ್ಷೇಪ, ಪ್ರಭಾವ ಬಳಕೆ ಇರುವುದಿಲ್ಲ. ಆಯುಷ್ ವೈದ್ಯರ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಹಮದಾಬಾದ್: ಸಂಘಟಿತ ಬ್ಯಾಟಿಂಗ್ ಮತ್ತು ಬೌಲಿಂಗ್ ಸಹಾಯದಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿದ ಗುಜರಾತ್ ಟೈಟನ್ಸ್ 2025ರ 18 ಆವೃತ್ತಿಯ…
ಮಂಗಳೂರು: ಪ್ರವೀಣ್ ನೆಟ್ಟಾರು ಹಂತಕ ದೇಶದ್ರೋಹಿಗೆ ಮತ್ತೊಬ್ಬ ದೇಶದ್ರೋಹಿ ಮುತ್ತಿಡುತ್ತಾನೆ. ನಮ್ಮ ಸರ್ಕಾರ, ಯಡಿಯೂರಪ್ಪ ಸರ್ಕಾರವಿದ್ದಿದ್ದರೆ ಆ ದೇಶದ್ರೋಹಿಗೆ ಅಲ್ಲೇ…
ಮಂಡ್ಯ: ಮಂಡ್ಯ ಮೈಶುಗರ್ ಕಾರ್ಖಾನೆಗೆ ನೂತನ ಎಂಡಿಯಾಗಿ ಮಂಗಲ್ ದಾಸ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.…
‘ಏಪ್ರಿಲ್ 16’ ಎಂದಷ್ಟೇ ಬರೆದು ಕಿಚ್ಚ ಸುದೀಪ್ ಮೂರು ಫೋಟೋಗಳನ್ನು ಕೆಲವು ದಿನಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಏಪ್ರಿಲ್.16ರಂದು…
‘ಪ್ರೀತಿಯ ಹುಚ್ಚ’ ಎಂದರೆ ಮೊದಲಿಗೆ ನೆನಪಿಗೆ ಬರುವುದು ‘ಹುಚ್ಚ’ ಚಿತ್ರದ ಸುದೀಪ್ ಪಾತ್ರ. ಆ ನಂತರ ‘ಚೆಲುವಿನ ಚಿತ್ತಾರ’ ಚಿತ್ರದ…
ಕನ್ನಡ ಚಿತ್ರರಂಗದಲ್ಲಿ ಹಲವರಿಗೆ ಸೂಕ್ತ ಅವಕಾಶ ಸಿಗದೆ, ಅವರ ಕುಟುಂಬದವರೇ ಚಿತ್ರ ನಿರ್ಮಾಣ ಮಾಡಿದ ಹಲವು ಉದಾಹರಣೆಗಳಿವೆ. ಈ ಸಾಲಿಗೆ…