Strict action against negligent official Chaluvarayaswamy
ಮೈಸೂರು : ಕ್ಷೇತ್ರ ಭೇಟಿಯಲ್ಲಿ, ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ, ಕರ್ತವ್ಯ ಲೋಪವೆಸಗುವ ಅಧಿಕಾರಿ ಸಿಬ್ಬಂದಿ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಮೈಸೂರಿನ ನಾಗನಹಳ್ಳಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಮೈಸೂರು ವಿಭಾಗ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಇನ್ನಷ್ಟು ಕಾಳಜಿ ವಹಿಸಿ ಕೆಲಸ ಮಾಡುವಂತೆ ಸೂಚನೆ ನೀಡಿದರು.
ಬಿತ್ತನೆ ಬೀಜ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಕೊರತೆಯಾಗದಂತೆ ನಿಗಾ ವಹಿಸಿ. ಶೇ 100% ಬಿತ್ತನೆಯಾಗುವಂತೆ ನೋಡಿಕೊಳ್ಳಿ ಎಂದು ಅವರು ಹೇಳಿದರು.
ಭೂಮಿಯ ಫಲವತ್ತತೆ, ಪರಿಸರ ಸಂರಕ್ಷಣೆ ಹಾಗೂ ಮಾನವನ ಆರೋಗ್ಯದ ದೃಷ್ಟಿಯಿಂದ ರಾಸಾಯನಿಕ ಮತ್ತು ಕೀಟನಾಶಕಗಳ ಬಳಕೆ ಕಡಿಮೆ ಮಾಡಲು ರೈತಾಪಿ ವರ್ಗದಲ್ಲಿ ಜಾಗೃತಿ ಮೂಡಿಸಿ ಎಂದು ಅವರು ನಿರ್ದೇಶನ ನೀಡಿದರು.
ರೈತರನ್ನು ಅನಗತ್ಯವಾಗಿ ಅಲೆದಾಡಿಸಬೇಡಿ: ಮಳೆ ಪರಿಸ್ಥಿತಿಗೆ ಅನುಗುಣವಾಗಿ ಪರ್ಯಾಯ ಬೆಳೆಗಳ ಬಗ್ಗೆಯೂ ಮಾರ್ಗದರ್ಶನ ನೀಡಿ, ಕೃಷಿ ಯಾಂತ್ರಿಕರಣ, ಕೃಷಿ ಭಾಗ್ಯ ಯೋಜನೆ ಜಾರಿ, ಸಾವಯವ ಕೃಷಿ, ಸಮಗ್ರ ಬೇಸಾಯದ ಬಗ್ಗೆ ಜಾಗೃತಿ ಮೂಡಿಸಲು ಆದ್ಯತೆ ನೀಡಿ ಎಂದ ಅವರು ಹೇಳಿದರು.
ಕೃಷಿ ವಿಶ್ವವಿದ್ಯಾಲಯಗಳ ಸಂಶೋಧನೆಗಳ ಫಲ ರೈತರಿಗೆ ತಲುಪಿಸುವಲ್ಲಿ ಆಸಕ್ತಿ ವಹಿಸಿ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯ ಮಹತ್ವದ ಬಗ್ಗೆ ಅರಿವು ಮೂಡಿಸುವಂತೆ ಸಚಿವರು ತಿಳಿಸಿದರು.
ಕೃಷಿ ಆಯುಕ್ತರಾದ ವೈ.ಎಸ್ ಪಾಟೀಲ್ ನಿರ್ದೇಶಕರಾದ ಡಾ. ಜಿ.ಟಿ ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕರಾದ ಮಹಮದ್ ಪರವೇಜ ಬಂಥನಾಳ, ರಾಜ್ಯ ಬೀಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅನುಪ್, ಬೀಜ ಪ್ರಮಾಣೀಕರಣ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಾದ ಡಾ ಸದಾನಂದ ಹಾಗೂ ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ಹಾಸನ,ಚಿಕ್ಕಮಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೃಷಿ ಅಧಿಕಾರಿಗಳು ಹಾಜರಿದ್ದರು.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…