ಮೈಸೂರು

ಸ್ವೀಪ್ ಚಟುವಟಿಕೆ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚನೆ: ಕೆ.ಎಂ.ಗಾಯಿತ್ರಿ

ಮೈಸೂರು : ಲೋಕಸಭಾ ಚುನಾವಣೆಯ ಸಂಬಂಧ ಜಿಲ್ಲೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಿಸಲು ಮತ್ತು ಮತದಾರರಲ್ಲಿ ನೈತಿಕ ಮತದಾನದ ಕುರಿತು ಶಿಕ್ಷಣ ಹಾಗೂ ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ರಚನೆ ಮಾಡಲಾಗಿದ್ದು ಸ್ವೀಪ್ ಕಾರ್ಯಕ್ರಮ ಅನುಷ್ಠಾನಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿಯ ನೋಡೆಲ್ ಅಧಿಕಾರಿಯೂ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎಂ.ಗಾಯಿತ್ರಿ ಅವರು ತಿಳಿಸಿದರು.

ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕರಲ್ಲಿ ನೈಜ ಮತದಾನದ ಅರಿವು ಮತ್ತು ಮತದಾನದ ಪ್ರಮಾಣ ಹೆಚ್ಚಿಸುವಲ್ಲಿ ಸ್ವೀಪ್ ಸಮಿತಿಯಿಂದ ಸ್ವೀಪ್ ಚಟುವಟಿಕೆ ಕಾರ್ಯಕ್ರಮಗಳನ್ನು ವ್ಯವಸ್ಥಿಕವಾಗಿ ಹಾಗೂ ಪರಿಣಾಮಕಾರಿಯಾಗಿ ನಿರ್ವಹಿಸುವ ಸಂಬAಧ ವಿವಿಧ ಇಲಾಖೆಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

ವಿಶೇಷ ಚೇತನರು, ಹಿರಿಯ ನಾಗರಿಕರು, ತೃತೀಯಲಿಂಗಿಗಳು ಹಾಗೂ ವಲಸೆ ಕಾರ್ಮಿಕರು ಮತದಾರರ ಪಟ್ಟಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೇರ್ಪಡೆಗೊಳ್ಳುವ ಸಲುವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಉತ್ತಮ ಯೋಜನೆಗಳನ್ನು ರೂಪಿಸಿಕೊಳ್ಳೂವಂತೆ ಸೂಚಿಸಿದರು.

ಮತದಾನಕ್ಕಿಂತ ಕಡಿಮೆ ಮತದಾನವಾಗಿರುವ ಮತಗಟ್ಟೆಗಳನ್ನು ಗುರುತಿಸಿ ಆ ಭಾಗದಲ್ಲಿ ಸೂಕ್ತ ಯೋಜನೆಗಳನ್ನು ರೂಪಿಸಿಕೊಂಡು ಸ್ವಿಪ್ ಚಟುವಟಿಕೆಗಳನ್ನು ನಡೆಸುವ ಮೂಲಕ ಮತದಾನದ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ಜಿಲ್ಲಾ ವಾರ್ತಾ ಮತ್ತು ಪ್ರಚಾರಾಧಿಕಾರಿಗಳು, ಎಲ್ಲಾ ಇಲಾಖೆಗಳು ಕೈಗೊಳ್ಳುವ ಸ್ವೀಪ್ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಪಡೆದು ಪ್ರತಿನಿತ್ಯ ಪತ್ರಿಕೆಗಳಲ್ಲಿ ಪ್ರಚಾರ ಮಾಡಬೇಕು. ಮೈಸೂರು ಆಕಾಶವಾಣಿ ಮೂಲಕ ಜನಸಾಮಾನ್ಯರಿಗೆ ಮತದಾನದ ಮಹತ್ವ ಬಗ್ಗೆ ಅಮೂಲ್ಯ ವ್ಯಕ್ತಿಗಳ ಸಂದರ್ಶನ, ಸ್ಕಿçಪ್ಟ್, ಮತದಾನದ ಹಾಡುಗಳ ಮೂಲಕ ಅರಿವು ಮೂಡಿಸಬೇಕು ಎಂದರು.

ಅಲ್ಲದೆ ಬಿಸಿಎಂ ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳಿಗೆ ಮತದಾನದ ಬಗ್ಗೆ ರಸಪ್ರಶ್ನೆ, ಪ್ರಭಂದ ಸ್ಪರ್ಧೆಯನ್ನ ನಡೆಸುವ ಮೂಲಕ ಯುವ ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಬೇಕು. ಜನಸಾಮಾನ್ಯರಿಗೆ ಮತದಾನದ ಮಹತ್ವದ ಬಗ್ಗೆ, ಬೀದಿ ನಾಟಕ, ಕಿರು ನಾಟಕಗಳ ಮೂಲಕ ಜಾಗೃತಿಯನ್ನು ಮೂಡಿಸುವಂತೆ ಸಲಹೆ ನೀಡಿದರು.

ಮತದಾರರಿಗೆ ಸ್ಟ್ರೀಟ್ ಡೆಮಾಕ್ರಸಿ ಫೆಸ್ಟಿವಲ್ ರೀತಿಯಲ್ಲಿ ಆಕರ್ಷಕವಾಗಿ ಕಾಣುವಂತೆ ಮಾಡಬೇಕು ಎಂದರು.

ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಜನಸಾಮಾನ್ಯರಿಗೆ ಮನೆ ಮನೆಗಳಿಗೆ ತೆರಳಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸುವಂತೆ ಸೂಚಿಸಿದರು.

ಎಲ್ಲಾ ಸಮಿತಿ ಸದಸ್ಯರು ತಮಗೆ ವಹಿಸಿದ ಕಾರ್ಯಹಂಚಿಕೆ ವ್ಯಾಪ್ತಿಯಲ್ಲಿ ನಡೆಸುವ ಸ್ವೀಪ್ ಚಟುವಟಿಕೆಗಳ ಸಂಬAಧ ಪ್ರತಿನಿತ್ಯ ಚಟುವಟಿಕೆಗಳನ್ನು ಕೈಗೊಳ್ಳಬೇಕು. ಸ್ವೀಪ್ ಕಾರ್ಯಕ್ರಮದ ಚಟುವಟಿಕೆಗಳ ಕುರಿತು ಇಲಾಖಾ ಅಧಿಕಾರಿಗಳು ಆಲ್ಬಂ ತಯಾರಿಸಿ ತಮ್ಮ ಇಲಾಖೆಯಲ್ಲಿ ಸಂರಕ್ಷಿಸಿಟ್ಟುಕೊಳ್ಳಬೇಕು ಎಂದರು.

ಸ್ವೀಪ್ ಘೋಷವಾಕ್ಯ

ಈ ವರ್ಷದ ಸ್ವೀಪ್ ಘೋಷವಾಕ್ಯ ‘ಚುನಾವಣಾ ಪರ್ವ ದೇಶದ ಗರ್ವ ಯಾವೊಬ್ಬ ಮತದಾರನೂ ಮತದಾನದಿಂದ ಹೊರಗುಳಿಯಬಾರದು. ‘ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ’ ಎಂಬ ಧ್ಯೇಯ ಹೊಂದಬೇಕು ಎಂಬ ಘೋಷವಾಕ್ಯದೊಂದಿಗೆ ಮತದಾರರ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಶುಭ, ಕೇಂದ್ರ ಪ್ರಚಾರ ಇಲಾಖೆಯ ಉಪನಿರ್ದೇಶಕರಾದ ಶೃತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

2 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

2 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

3 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

5 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

9 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

9 hours ago