ಮೈಸೂರು: ಭಾರತೀಯ ಸಂಸ್ಕೃತಿಯ ಮತ್ತು ಪರಂಪರೆಯ ಉಳಿವಿಗಾಗಿ ಹೋರಾಡುವ ಸಂದರ್ಭ ಎದುರಾಗಿದೆ ಎಂದು ಶಾಸಕ ಟಿಎಸ್ ಶ್ರೀವತ್ಸ ಹೇಳಿದರು.
ನಗರದ ಕುವೆಂಪು ನಗರದಲ್ಲಿರುವ ಶ್ರೀ ಮಾತಾ ವಿದ್ಯಾಸಂಸ್ಥೆಯಲ್ಲಿ ಪದ್ಮಶ್ರೀ ಹಾಗೂ ರವಿಶಂಕರ್ ಅವರ ಶಾಲೆಯ ಬೊಂಬೆ ಮನೆಗೆ ಭೇಟಿ ನೀಡಿ ಬೊಂಬೆಗಳನ್ನು ವೀಕ್ಷಿಸಿ ಬಳಿಕ ಮಾತನಾಡಿದ ಅವರು, ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ವಿಶೇಷ ಸ್ಥಾನಮಾನ ನೀಡಲಾಗಿದೆ. ಆದರೂ, ಇಂದಿನ ದಿನದಲ್ಲಿ ಯುವ ಜನತೆ ಸಂಸ್ಕೃತಿ ಹಾಗೂ ಪರಂಪರೆಯನ್ನು ಮರೆಯುತ್ತಿರುವುದು ವಿಪರ್ಯಾಸ ಎಂದು ಬೇಸರಿಸಿದರು.
ಹಬ್ಬಹರಿದಿನಗಳು ಪರಂಪರೆಯಿಂದ ವಿಶೇಷ ಸ್ಥಾನಮಾನ ಹೊಂದುವ ಮೂಲಕ ತನ್ನದೆಯಾದ ಹಿನ್ನೆಲೆ ಹೊಂದಿವೆ. ಅದರಲ್ಲಿ ದಸರಾ ಹಬ್ಬ ಬಹುದೊಡ್ಡ ಸಂಭ್ರಮವಾಗಿದೆ. ಈ ಹಬ್ಬದಲ್ಲಿ ದಸರಾ ಗೊಂಬೆಗಳನ್ನು ಕುರಿಸುವ ಮೂಲಕ ವಿಶೇಷವಾಗಿ ಸಾಂಸ್ಕೃತಿಕ ನಗರದಲ್ಲಿ ಆಚರಿಸುತ್ತಿರುವುದು ಸಂತಸ ತಂದಿದೆ ಎಂದರು.
ಪ್ರತಿಯೊಬ್ಬರು ಸಂಸ್ಕೃತಿ ಉಳಿಯುವಿಕೆಗಾಗಿ ಶ್ರಮಿಸಬೇಕು. ನಮ್ಮ ಸಂಪ್ರದಾಯ ಮತ್ತು ಧಾರ್ಮಿಕತೆಯ ರಕ್ಷಣೆಗಾಗಿ ಪ್ರತಿಯೊಬ್ಬ ಹಿಂದುಗಳು ಒಗ್ಗಟ್ಟಾಗಿ ಕಲೆತು ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕು ಎಂದು ಕರೆ ನೀಡಿದರು.
ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ…
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…
ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…
ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…
ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…