ಮೈಸೂರು

ದಸರಾ ಯಶಸ್ವಿಗೆ ಉಪಸಮಿತಿಗಳು ಉತ್ತಮ ಸಿದ್ಧತೆ ನಡೆಸಿ: ಸಚಿವ ಹೆಚ್‌ಸಿ ಮಹದೇವಪ್ಪ

ಸೆಪ್ಟೆಂಬರ್: ಈ ಬಾರಿ ದಸರಾ ಆಚರಣೆಯನ್ನು ಅದ್ದೂರಿಯಾಗಿಸಲು ಹೈ ಪವರ್ ಕಮಿಟಿಯಲ್ಲಿ ತೀರ್ಮಾನಿಸಿದ್ದು, ಈ ಸಂಬಂಧ 19 ಉಪಸಮಿತಿಗಳನ್ನು ರಚಿಸಿದ್ದು, ಸಮಿತಿಯ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ದಸರಾ ಆಚರಣೆಯನ್ನು ಯಶಸ್ವಿಗೊಳಿಸಿ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪ  ಹೇಳಿದರು.

ಬುಧುವಾರ ಅರಮನೆ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ದಸರಾ ಉಪಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲಾ ಸಮಿತಿಯ ಅಧಿಕಾರಿಗಳು ಸೂಕ್ತ ತಯಾರಿ ಮಾಡಿಕೊಂಡು ಅಚ್ಚುಕಟ್ಟಾಗಿ ದಸರಾ ಆಚರಣೆ ಮಾಡಬೇಕು. ಸ್ತಬ್ಧ ಚಿತ್ರಗಳು ನಮ್ಮ ಸಂಸ್ಕೃತಿಯನ್ನು ಬಿಂಬಿಸುವಂತೆ ಇರಬೇಕು. ಜನರಿಗೆ ಸಾಮಾಜಿಕ ಸಂದೇಶ ಸಾರುವಂತೆ ಇರಬೇಕು. ಸಂವಿಧಾನದ ಸಂದೇಶ, ಪೂರ್ವ ಪೀಠಿಕೆಯ ಮಹತ್ವವನ್ನು ತಿಳಿಸುವ ಸ್ಥಬ್ದ ಚಿತ್ರ ತಯಾರಿಕೆಗೆ ಮಾಡಬೇಕು ಎಂದು ಸ್ಥಬ್ದ ಚಿತ್ರ ಉಪಸಮಿತಿಗೆ ತಿಳಿಸಿದರು.

ರೈತರು ದೇಶದ ಬೆನ್ನೆಲುಬು. ರೈತ ದಸರಾದಲ್ಲಿ ರೈತರಿಗೆ ಅನುಕೂಲವಾಗುವ ಕೃಷಿ ಸಾಧನ ಸಲಕರಣೆಗಳ ಪ್ರದರ್ಶನ ಏರ್ಪಡಿಸಬೇಕು. ಸಬ್ಸಿಡಿ ದರದಲ್ಲಿ ದೊರೆಯುವ ಆಧುನಿಕ ಕೃಷಿ ಸಲಕರಣೆಗಳ ಬಗ್ಗೆ ಮಾಹಿತಿ ಒದಗಿಸಬೇಕು. ಶುಂಠಿ ಬೆಳೆಯನ್ನು ಬೆಳೆಯಲು ರೈತರು ಭೂಮಿಯನ್ನು ಗುತ್ತಿಗೆಗೆ ನೀಡುತ್ತಿದ್ದು, ಶುಂಠಿ ಬೆಳೆಯನ್ನು ಬೆಳೆಯುವುದರಿಂದ ಮಣ್ಣಿನ ಫಲವತ್ತತೆ ಕಡಿಮೆ ಆಗಿ ಮುಂದಿನ ಒಂದೆರಡು ವರ್ಷ ಉತ್ತಮ ಬೆಳೆ ಬರುವುದಿಲ್ಲ. ಈ ಬಗ್ಗೆ ರೈತರಿಗೆ ಜಾಗೃತಿ ಮೂಡಿಸುವ ಬಗ್ಗೆ ಸ್ಥಬ್ದ ಚಿತ್ರಗಳಿರಬೇಕು ಎಂದರು.

ದಸರಾ ಕ್ರೀಡಾಕೂಟಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸ್ಪರ್ಧಿಗಳು ಭಾಗವಹಿಸುತ್ತಾರೆ. ಇವರಿಗೆ ಉತ್ತಮ ಊಟ ಹಾಗೂ ವಸತಿ ಸೌಲಭ್ಯ ಕಲ್ಪಿಸಬೇಕು. ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನಮ್ಮ ದೇಶದ ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ಹೆಚ್ಚು ಆಯೋಜಿಸಬೇಕು. ಜನಪದ ಕಲೆಗಳನ್ನು ಪ್ರದರ್ಶನ ಮಾಡಬೇಕು. ಕಲಾವಿದರಿಗೆ ಪಾರದರ್ಶಕವಾಗಿ ಅವಕಾಶ ಕಲ್ಪಿಸಬೇಕು. ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಕ್ಕಳಿಗೆ ಚಿತ್ರ ಕಲಾ ಸ್ಪರ್ಧೆಗಳನ್ನು ಆಯೋಜನೆ ಮಾಡಬೇಕು. ಕರಕುಶಲ ವಸ್ತುಗಳ ಸ್ಪರ್ಧೆಯನ್ನು ಏರ್ಪಡಿಸಬೇಕು. ಕವಿಗೋಷ್ಠಿಯನ್ನು ವಿಶಿಷ್ಟ ರೀತಿಯಲ್ಲಿ ಆಯೋಜನೆ ಮಾಡಿ ಯುವ ಕವಿಗಳಿಗೆ ಆದ್ಯತೆ ನೀಡಬೇಕು. ಯೋಗ ದಸರಾದಲ್ಲಿ ಆರೋಗ್ಯಯುತ ಜೀವನಕ್ಕಾಗಿ ಯೋಗ ಎಂಬ ಅರಿವನ್ನು ಮೂಡಿಸುವ ಹಾಗೆ ಇರಬೇಕು. ಆಹಾರ ಮೇಳದಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು. ಆರೋಗ್ಯಕರ ಗುಣಮಟ್ಟದ ತಿಂಡಿ ತಿನಿಸುಗಳ ಮರಾಟವಾಗಬೇಕು. ಮೈಸೂರು ನಗರದ ರಸ್ತೆಗಳ ಗುಂಡಿಗಳ ಮುಚ್ಚುವ ಕಾರ್ಯವನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಬೇಕು ಎಂದು ತಿಳಿಸಿದರು.

ದಸರಾ ಚಲನಚಿತ್ರೋತ್ಸವದಲ್ಲಿ ಸಾಮಾಜಿಕ ಕಳಕಳಿಯುಳ್ಳ ಕಲಾತ್ಮಕ ಚಿತ್ರಗಳ ಪ್ರದರ್ಶನಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ವಿವಿಧ ಉಪಸಮಿತಿಗಳ ಉಪ ವಿಶೇಷಾಧಿಕಾರಿಗಳು ತಾವು ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು, ಉಪಸಮಿತಿಗಳ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

10 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

10 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

10 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

10 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

11 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

11 hours ago