ಮೈಸೂರು

ಗೃಹ ಜ್ಯೋತಿ ಹಾಗೂ ಕೃಷಿ ಪಂಪ್‌ ಸೆಟ್‌ಗಳಿಗೆ ಸಹಾಯಧನ

ಮೈಸೂರು : ರಾಜ್ಯ ಸರ್ಕಾರದ ವತಿಯಿಂದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ವ್ಯಾಪ್ತಿಯಲ್ಲಿ ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ ಅರ್ಹ ಗ್ರಾಹಕರ ವಿದ್ಯುತ್‌ ಸ್ಥಾವರಗಳಿಗೆ 1995.18 ಕೋಟಿ ರೂ. ಹಾಗೂ ಕೃಷಿ ನೀರಾವರಿ ಪಂಪ್‌ ಸೆಟ್‌ ವಿದ್ಯುತ್‌ ಸ್ಥಾವರಗಳಿಗೆ 6717.79 ಕೋಟಿ ರೂ.ಗಳ ಸಹಾಯ ಧನವನ್ನು ಬಿಡುಗಡೆ ಮಾಡಲಾಗಿದೆ.

ಸೆಸ್ಕ್‌ ವ್ಯಾಪ್ತಿಗೆ ಒಳಪಡುವ ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಹಾಗೂ ಹಾಸನ ಜಿಲ್ಲೆಗಳ ವ್ಯಾಪ್ತಿಯಲ್ಲಿ 2317781 ಗ್ರಾಹಕರು ರಾಜ್ಯ ಸರ್ಕಾರದ ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ ನೊಂದಣಿಯಾಗಿದ್ದಾರೆ. ಸದರಿ ಯೋಜನೆ ಅಡಿಯಲ್ಲಿ ನೊಂದಣಿಯಾಗಿರುವ ಅರ್ಹ ಗ್ರಾಹಕರ ವಿದ್ಯುತ್‌ ಸ್ಥಾವರಗಳಿಗೆ 2023ರ ಆಗಸ್ಟ್‌ನಿಂದ 2025ರ ಜೂನ್‌ವರೆಗೆ 1995.18 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.

ಮೈಸೂರು ಜಿಲ್ಲೆಯ 900148 ಗ್ರಾಹಕರಿಂದ 872.14 ಕೋಟಿ ರೂ.ಗಳು, ಚಾಮರಾಜನಗರ ಜಿಲ್ಲೆಯ 264749 ಗ್ರಾಹಕರಿಂದ 186.28 ಕೋಟಿ ರೂ.ಗಳು, ಕೊಡಗು ಜಿಲ್ಲೆಯ 154290 ಗ್ರಾಹಕರಿಂದ 149.85 ಕೋಟಿ ರೂ.ಗಳು, ಮಂಡ್ಯ ಜಿಲ್ಲೆಯ 480349 ಗ್ರಾಹಕರಿಂದ 393.69 ಕೋಟಿ ರೂ.ಗಳು ಹಾಗೂ ಹಾಸನ ಜಿಲ್ಲೆಯ 518245 ಗ್ರಾಹಕರಿಂದ 393.22 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.

ಕೃಷಿ ಪಂಪ್‌ಸೆಟ್‌ಗಳಿಗೆ 6717.79 ಕೋಟಿ ರೂ. ಸಹಾಯಧನ ನೀಡಲಾಗಿದೆ
ಸೆಸ್ಕ್‌ ವ್ಯಾಪ್ತಿಯ 10 ಎಚ್‌.ಪಿ. ಮತ್ತು 10 ಎಚ್.ಪಿ. ವರೆಗಿನ ಕೃಷಿ ನೀರಾವರಿ ಪಂಪ್ ಸೆಟ್ ವಿದ್ಯುತ್ ಸ್ಥಾವರಗಳಿಗೆ 2023ರ ಮೇ ತಿಂಗಳಿನಿಂದ 2025ರ ಮೇ ತಿಂಗಳವರೆಗೆ ಮೈಸೂರು ಜಿಲ್ಲೆಯ 149472 ಗ್ರಾಹಕರಿಂದ 1528.37 ಕೋಟಿ ರೂ., ಚಾಮರಾಜನಗರ ಜಿಲ್ಲೆಯ 75815 ಗ್ರಾಹಕರಿಂದ 1042.97 ಕೋಟಿ ರೂ., ಕೊಡಗು ಜಿಲ್ಲೆಯ 9337 ಗ್ರಾಹಕರಿಂದ 91.75 ಕೋಟಿ ರೂ., ಮಂಡ್ಯ ಜಿಲ್ಲೆಯ 121935 ಗ್ರಾಹಕರಿಂದ 2287.28 ಕೋಟಿ ರೂ. ಹಾಗೂ ಹಾಸನ ಜಿಲ್ಲೆಯ 143685 ಗ್ರಾಹಕರಿಂದ 1767.42 ಕೋಟಿ ರೂ.ಗಳು ಸೇರಿದಂತೆ ಐದು ಜಿಲ್ಲೆಗಳ 500244 ಗ್ರಾಹಕರಿಂದ 6717.79 ಕೋಟಿ ರೂ.ಗಳ ಸಹಾಯಧನ ಬಿಡುಗಡೆ ಮಾಡಲಾಗಿದೆ ಎಂದು ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌)ದ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್‌ ರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

6 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

8 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

10 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

10 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

11 hours ago