Mysore
24
overcast clouds

Social Media

ಮಂಗಳವಾರ, 24 ಜೂನ್ 2025
Light
Dark

ಶಿಸ್ತಿನ ಅಧ್ಯಯನ ನಡೆಸಿದ್ದಲ್ಲಿ ಯಶಸ್ಸು ಖಂಡಿತ : ಕೆ.ಎಂ ಸವಿತ

ಮೈಸೂರು: ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಉತ್ತಮ ಮಾರ್ಗದರ್ಶನದೊಂದಿಗೆ ಶಿಸ್ತಿನ ಅಧ್ಯಯನ ನಡೆಸಿದ್ದಲ್ಲಿ ಯಸಸ್ಸು ಪಡೆಯುವುದು ಖಚಿತ ಎಂದು ಮೈಸೂರು ವಿಭಾಗದ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೆಶಕರಾದ ಎಂ.ಕೆ. ಸವಿತ ಹೇಳಿದರು.

ನಗರದ ಪೀಪಲ್ಸ್ ಪಾರ್ಕ್ನಲ್ಲಿರುವ ನಗರ ಕೇಂದ್ರ ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳ ಉಪಯೋಗಕ್ಕಾಗಿ ಸಾಮಾನ್ಯಜ್ಞಾನ ಮತ್ತು ಭೂಗೋಳ ಶಾಸ್ತ್ರಕ್ಕೆ ಸಂಬoಧಿಸಿದoತೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ವಿಶೇಷವಾಗಿ ದೈನಂದಿನ ಪತ್ರಿಕೆಗಳನ್ನು ಓದುವ ಹವ್ಯಾಸ ಹಾಗೂ ಕನ್ನಡ ಮತ್ತು ಇಂಗ್ಲೀಷ್ ವಾರ್ತೆಗಳನ್ನು ಹಾಗೂ ರೇಡಿಯೋದಲ್ಲಿ ಪ್ರಸಾರವಾಗುವ ವಿಶೇಷ ಕಾರ್ಯಕ್ರಮಗಳನ್ನು ಆಲಿಸುವುದರಿಂದ ತಮ್ಮ ಸಾಮಾನ್ಯಜ್ಞಾನ ಮಟ್ಟವನ್ನು ಹೆಚ್ಚಿಸಿಕೊಳ್ಳಬಹುದಾಗಿದೆ ಎಂದು ವಿದ್ಯಾರ್ಥಿಗಳಿಗೆ ಸಾಮಾನ್ಯಜ್ಞಾನದ ಅಧ್ಯಯನದ ಕುರಿತು ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.

ಕಾರ್ಯಕ್ರಮದಲ್ಲಿ ನಿವೃತ್ತ ವಾಣಿಜ್ಯ ತೆರಿಗೆ ಅಧಿಕಾರಿಗಳಾದ ಶ್ರೀ ರಮೇಶ್ ನರಸಯ್ಯ ಹಾಗೂ ಗ್ರಂಥಾಲಯದ ಸಿಬ್ಬಂದಿ ವರ್ಗದವರು ಹಾಗೂ 50ಕ್ಕೂ ಹೆಚ್ಚು ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳು ಹಾಜರಾಗಿದ್ದರು.

Tags:
error: Content is protected !!