ಮೈಸೂರು

ಸರ್ಕಾರದ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿ: ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು: ರಾಜ್ಯದ ಅಭಿವೃದ್ಧಿಯ ನೊಗ ಹೊತ್ತಿರುವ ನಾವೆಲ್ಲರೂ ಜವಬ್ದಾರಿಯುತ ಸ್ಥಾನದಲ್ಲಿದ್ದೇವೆ. ಸರ್ಕಾರದ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ ದೇಶದಲ್ಲೇ ಕರ್ನಾಟಕ ರಾಜ್ಯ ಮಾದರಿಯಾಗುವಂತೆ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಶ್ರಮವಹಿಸಿ ಕೆಲಸ ಮಾಡಬೇಕಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿರಾದ ಡಾ.ಹೆಚ್.ಸಿ.ಮಹದೇವಪ್ಪ ಹೇಳಿದರು.

ಇಂದು ನಗರದ ಧನ್ವಂತರಿ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಸಂಘದ ನವೀಕೃತ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಜವಬ್ದಾರಿ ಮತ್ತು ಹೊಣೆಗಾರಿಕೆಯನ್ನು ಜನರ ಹಕ್ಕು ಮತ್ತು ರಕ್ಷಣೆಗೆ ಸಮರ್ಪಿಸಬೇಕಿದೆ ಎಂದು ತಿಳಿಸಿದರು.

ಸಂವಿಧಾನದ ಅಡಿಯಲ್ಲಿ ಕೆಲಸ ಮಾಡುತ್ತಿರುವ ನಾವೆಲ್ಲರೂ ಸಂವಿಧಾನದ ಆಶಯಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಸಾಮಾನ್ಯ ಜನರ ಏಳಿಗೆಗೆ ದುಡಿಯಬೇಕು. ಕಾನೂನಿನ್ವಯ ಕೆಲಸ ಮಾಡುವ ಮೂಲಕ ಯಾವಾಗಲೂ ಜನಪರವಾಗಿರಬೇಕು ಎಂದು ಕರೆ ನೀಡಿದರು.

ಬಸವಣ್ಣನ ಕಾಲದಿಂದಲೂ ಪ್ರಜಾಪ್ರಭುತ್ವ ಜಾರಿಯಲ್ಲಿದೆ. ಜನರಿಂದ, ಜನರಿಗಾಗಿ, ಜನರಿಗೋಸ್ಕರ ಆಡಳಿತ ನಡೆಸುವುದು ಪ್ರಜಾಪ್ರಭುತ್ವದ ಆಶಯ. ಜನರ ಭವಿಷ್ಯವನ್ನು ಉಜ್ವಗೊಳಿಸುವಲ್ಲಿ ಪ್ರಜಾಪ್ರಭುತ್ವದ ನಾಲ್ಕು ಆಧಾರ ಸ್ತಂಭಗಳ ಕರ್ತವ್ಯ ಮಹತ್ವದ್ದಾಗಿದೆ. ಅದರಲ್ಲಿ ಜನಪರವಾದ ಕಾಯ್ದೆಗಳನ್ನು ಅನುಷ್ಠಾನ ಮಾಡುವಲ್ಲಿ ಕಾರ್ಯಾಂಗದ ಕರ್ತವ್ಯವು ಹಿರಿದಾಗಿದೆ ಎಂದರು.

ಅಭಿವೃದ್ಧಿಯ ಕೇಂದ್ರ ಬಿಂದು ಸರ್ಕಾರಿ ನೌಕರರಾಗಿದ್ದಾರೆ. ಸರ್ಕಾರದ ಅಭಿವೃದ್ಧಿ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗಲು ನೌಕಕರ ಶ್ರಮ ಬಹಳಷ್ಟಿದೆ. ನೌಕರರ ಸಮಸ್ಯೆಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿ ಕಾಲಕಾಲಕ್ಕೆ ಸೂಕ್ತ ಪರಿಹಾರ ಮಾರ್ಗಗಳನ್ನು ಅನುಸರಿಸುತ್ತಾ ಬಂದಿದೆ ಎಂದು ಹೇಳಿದರು.

ಶಾಸಕ ಹರೀಶ್ ಗೌಡ ಮಾತನಾಡಿ, ನಮ್ಮ ಸರ್ಕಾರವು 7ನೇ ವೇತನ ಆಯೋಗ ಜಾರಿಗೆ ಮಾಡಿದೆ. ಸರ್ಕಾರಿ ನೌಕರರ ಹಿತ ಕಾಪಾಡುವಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ‌. ಸಂಘಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಸಹಾಯ ಮತ್ತು ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಅರಪ ಜಿಲ್ಲಾಧಿಕಾರಿ ಪಿ.ಶಿವರಾಜು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಜಿಲ್ಲಾ ಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು ಸೇರಿದಂತೆ ರಾಜ್ಯ ಹಾಗೂ ಜಿಲ್ಲಾ ಸಂಘದ ಉಪಾಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago