ನಂಜನಗೂಡು : ಪ್ರಿಯಕರನನ್ನು ಕರೆಸದಿದ್ದರೆ ಕಟ್ಟಡದಿಂದ ಹಾರಿ ಆತಮಹತ್ಯೆ ಮಾಡಿಕೊಳ್ಳುವುದಾಗಿ ಯುವತಿ ಒಬ್ಬಳು ಕಟ್ಟಡ ಏರಿ ನಿಂತ ಘಟನೆ ನಗರದ ಲಾಡ್ಜ್ ಒಂದರಲ್ಲಿ ನಡೆದಿದೆ.
ಇಂದು ಬೆಳಗ್ಗೆ ಪಟ್ಣಣದ ರಾಷ್ಟ್ರಪತಿ ರಸ್ತೆಯಲ್ಲಿರುವ ಹನಿಡ್ಯೂ ಲಾಡ್ಜ್‌ನಲ್ಲಿಯುವತಿ ಒಬ್ಬಳ ಆತ್ಮಹತ್ಯೆ ಹೈಡ್ರಾಮ ನಡೆದಿದೆ.
ಯುವತಿ ಬಿಹಾರಿ ಮೂಲದವಳಾಗಿದ್ದು, ಪಟ್ಟಣದ ಹೊರವಲಯದಲ್ಲಿರುವ ಏಶಿಯನ್ ಪೇಂಟ್ಸ್‌ನಲ್ಲಿ ಕಾರ್ಮಿಕನಾಗಿದ್ದ ಬೀಹಾರಿ ಮೂಲದ ಯುವಕನ್ನು ಪ್ರೀತಿಸುತ್ತಿದ್ದಳು ಎಂದು ತಿಳಿದು ಬಂದಿದೆ.
ಆತನನ್ನು ಭೇಟಿ ಮಾಡಲು ಬಿಹಾರದಿಂದ ಬಂದಿದ್ದ ಯುವತಿಗೆ, ತನ್ನ ಪ್ರಿಯತಮ ಹನಿಡ್ಯೂ ಲಾಡ್ಜ್‌ನಲ್ಲಿ ಇರುವುದು ತಿಳಿದುಬಂದಿದೆ.
ಅಲ್ಲಿ ಆತ ಇಲ್ಲದಿರುವುದನ್ನು ತಿಳಿದು ಆಕೆ ಬೇಸರದಿಂದ ಲಾಡ್ಜ್ ಮೇಲ್ಮಹಡಿಗೆ ತೆರಳಿ, ಯುವಕನನ್ನು ಕರೆಸದಿದ್ದರೆ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾಳೆ. ಕೂಡಲೆ ಲಾಡ್ಜ್‌ನ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಿಬ್ಬಂದಿ ಯುವತಿಯನ್ನು ರಕ್ಷಿಸಿ ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ನಂಜನಗೂಡು ಪಟ್ಟಣ ಪೊಲೀಸರು ತನಿಖೆ ನಡೆಸಿದ್ದಾರೆ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…