ಮೈಸೂರು : ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಪ್ರಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಹೆಚ್.ಡಿ.ಕೆ , ಇನ್ನೂ ಮೂರು ದಿನ ಇದೆ ನೋಡೋಣ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಲತಾ ಇಂದು ಮೈಸೂರಿನಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ. ಆದರೆ ಮಂಡ್ಯದಲ್ಲಿ ಇನ್ನೂ ಪ್ರಚಾರ ಕೈಗೊಂಡಿಲ್ಲ ಏಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅವರು ಈಗ ಬಿಜೆಪಿ ಸೇರಿದ್ದಾರೆ. ಪಕ್ಷ ಹೇಳಿದ ಕಡೆಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಇನ್ನು ಮೂರು ದಿನ ಇದೆ, ನೋಡೋಣ ಎಂದರು.
ಮುಂದುವರೆದಂತೆ, ಸುಮಲತಾ ನಮ್ಮಲ್ಲಿ ಕೂಡ ಬಂದು ಪ್ರಚಾರ ಮಾಡಬಹುದು. ಕೇವಲ ಹೇಳಿಕೆಗಳನ್ನು ನೀಡುವುದರಿಂದ ಏನೂ ಆಗುವುದಿಲ್ಲ. ಹೇಳಿಕೆ ಕೊಡದೆಯೂ ಬೆಂಬಲ ನೀಡಬಹುದು ಅಲ್ಲವೇ ಎಂದು ಪ್ರಶ್ನಿಸಿದರು.
ಈ ಬಗ್ಗೆ ಈಗಾಗೇ ಉತ್ತರ ನೀಡಿರುವ ಸಂಸದೆ ಸುಮಲತಾ ಅವರು, ಪಕ್ಷದ ನಾಯಕರು ಹೇಳಿದ ಕಡೆ ಪ್ರಚಾರ ಮಾಡಲಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದರು.
ನಾನು ಕೇಳಲು ಸಾಧ್ಯವಿಲ್ಲ : ಇನ್ನು ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ದರ್ಶನ್ ಪ್ರಚಾರ ಮಾಡಿದ ಬಗ್ಗೆ ಉತ್ಅತರಿಸಿರುವ ಸುಮಲತಾ, ಅವರಿಗೆ ಇಷ್ಟವಾದವರ ಪರ ಪ್ರಚಾರ ನಡೆಸುತ್ತಾರೆ. ಅದನ್ನು ನಾನು ಕೇಳಲು ಸಾಧ್ಯವಿಲ್ಲ. ನಾನು ಪಕ್ಷ ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದಿದ್ದಾರೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…