ಮೈಸೂರು

ಪ್ರಚಾರಕ್ಕೆ ಬಾರದ ಸುಮಲತಾ : ಇನ್ನೂ ಮೂರು ದಿನ ಇದೆ ನೋಡೋಣ ಎಂದು ಹೆಚ್‌ಡಿಕೆ !

ಮೈಸೂರು : ಮಂಡ್ಯದಲ್ಲಿ ಸುಮಲತಾ ಅಂಬರೀಶ್‌ ಪ್ರಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಹೆಚ್‌.ಡಿ.ಕೆ , ಇನ್ನೂ ಮೂರು ದಿನ ಇದೆ ನೋಡೋಣ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಲತಾ ಇಂದು ಮೈಸೂರಿನಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ. ಆದರೆ ಮಂಡ್ಯದಲ್ಲಿ ಇನ್ನೂ ಪ್ರಚಾರ ಕೈಗೊಂಡಿಲ್ಲ ಏಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,  ಅವರು ಈಗ ಬಿಜೆಪಿ ಸೇರಿದ್ದಾರೆ. ಪಕ್ಷ ಹೇಳಿದ ಕಡೆಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಇನ್ನು ಮೂರು ದಿನ ಇದೆ, ನೋಡೋಣ ಎಂದರು.

ಮುಂದುವರೆದಂತೆ,  ಸುಮಲತಾ ನಮ್ಮಲ್ಲಿ ಕೂಡ ಬಂದು ಪ್ರಚಾರ ಮಾಡಬಹುದು. ಕೇವಲ ಹೇಳಿಕೆಗಳನ್ನು ನೀಡುವುದರಿಂದ ಏನೂ ಆಗುವುದಿಲ್ಲ. ಹೇಳಿಕೆ ಕೊಡದೆಯೂ ಬೆಂಬಲ ನೀಡಬಹುದು ಅಲ್ಲವೇ ಎಂದು ಪ್ರಶ್ನಿಸಿದರು.

ಈ ಬಗ್ಗೆ ಈಗಾಗೇ ಉತ್ತರ ನೀಡಿರುವ ಸಂಸದೆ ಸುಮಲತಾ ಅವರು,   ಪಕ್ಷದ ನಾಯಕರು ಹೇಳಿದ ಕಡೆ ಪ್ರಚಾರ ಮಾಡಲಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದರು.

ನಾನು ಕೇಳಲು ಸಾಧ್ಯವಿಲ್ಲ :  ಇನ್ನು ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ದರ್ಶನ್‌ ಪ್ರಚಾರ ಮಾಡಿದ ಬಗ್ಗೆ ಉತ್ಅತರಿಸಿರುವ ಸುಮಲತಾ, ಅವರಿಗೆ ಇಷ್ಟವಾದವರ ಪರ ಪ್ರಚಾರ ನಡೆಸುತ್ತಾರೆ. ಅದನ್ನು ನಾನು ಕೇಳಲು ಸಾಧ್ಯವಿಲ್ಲ. ನಾನು ಪಕ್ಷ ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

1 hour ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

1 hour ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

1 hour ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

1 hour ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

2 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

3 hours ago