ಮೈಸೂರು

ಚಾಮರಾಜನಗರ ಜಿಲ್ಲೆ ಅಭಿವೃದ್ಧಿ ವಿಚಾರ| ಸಿಎಂ ಬಳಿ 3 ಸಾವಿರ ಕೋಟಿ ರೂ. ಅನುದಾನಕ್ಕೆ ಮನವಿ: ಸುನೀಲ್‌ ಬೋಸ್‌

ಮೈಸೂರು: ಚಾಮರಾಜನಗರ ಹಿಂದುಳಿದ ಜಿಲ್ಲೆ ಎಂಬ ಹಣೆ ಪಟ್ಟಿ ಇರುವ ಹಿನ್ನೆಲೆಯಲ್ಲಿ ಅದನ್ನು ತೆಗೆದುಹಾಕಲು ವಿಶೇಷ ಯೋಜನೆ ರೂಪಿಸಿದ್ದು, ಜಿಲ್ಲೆಯ ಅಭಿವೃದ್ಧಿಗಾಗಿ ಸಿಎಂ ಬಳಿ 3 ಸಾವಿರ ಕೋಟಿ ರೂ. ಅನುದಾನ ನೀಡುವಂತೆ ಮನವಿ ಮಾಡಲಾಗಿದೆ ಎಂದು ಸಂಸದ ಸುನೀಲ್‌ ಬೋಸ್‌ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು(ಫೆಬ್ರವರಿ.19) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನಂಜುಂಡಪ್ಪ ವರದಿ ಪ್ರಕಾರ ಚಾಮರಾಜನಗರ ಜಿಲ್ಲೆ ಹಿಂದುಳಿದ ಜಿಲ್ಲೆ ಎಂದು ಘೋಷಣೆ ಆಗಿದೆ. ಅದರ ಅನುಗುಣವಾಗಿ ವಿಶೇಷ ಪ್ಯಾಕೇಜ್‌ಗಳನ್ನು ನೀಡುವ ಕೆಲಸ ಆಗುತ್ತಿಲ್ಲ. ನಾನು ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ವ್ಯವಸಾಯ ಮಾಡದೆ ಬರಡು ಬಿದ್ದಿರುವ ಭೂಮಿಗಾಗಿ ವಿಶೇಷ ಯೋಜನೆ ರೂಪಿಸಿದ್ದೇವೆ ಎಂದರು.

ಇನ್ನು ಬರಡು ಭೂಮಿಯನ್ನು ವ್ಯವಸಾಯದತ್ತ ತರುವ ನಿರಾವರಿ ಯೋಜನೆಗೆ ಸುಮಾರು 3 ಸಾವಿರ ಕೋಟಿ ರೂ. ಪ್ರಾಜೆಕ್ಟ್‌ಗೆ ಮನವಿ ಮಾಡಿದ್ದೇನೆ. ಅಲ್ಲದೇ ಸರ್ಕಾರದಿಂದ ಹಂತ ಹಂತವಾಗಿ ಹಣ ಬಿಡುಗಡೆಗೊಳಿಸುವಂತೆ ಹೇಳಿದ್ದೇನೆ. ಹೀಗಾಗಿ ಅನುದಾನದ ಹಣದಿಂದ ಬರಡು ಭೂಮಿಗಳಿಗೆ ನೀರಾವರಿ ಒದಗಿಸಬಹುದು ಎಂದು ಹೇಳಿದರು.

ಈಗಾಗಲೇ ನೀರಾವರಿ ಸೌಲಭ್ಯ ಇಲ್ಲದೆ ಅಲ್ಲಿನ ನಾಲೆಗಳು ಪಾಳು ಬಿದ್ದಂತಿವೆ. ಆ ನಾಲೆಗಳ ಯೋಜನೆಗಳ ಬಗ್ಗೆ ಡಿಪಿಆರ್ ತಯಾರಾಗಿದೆ. ಈ ಯೋಜನೆಗಳಿಗೂ ಸಿಎಂ ಸಿದ್ದರಾಮಯ್ಯ ಅವರು ಅನುದಾನ ನೀಡುವ ವಿಶ್ವಾಸ ಇದೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

10 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

10 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

10 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

10 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

10 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

11 hours ago