ಕೆ.ಆರ್ ನಗರ: ಇಂದಿನ ವಿದ್ಯಾರ್ಥಿಗಳು ಮೊಬೈಲ್, ಟಿ.ವಿ.ನೋಡುವುದರಲ್ಲಿ ಹೆಚ್ಚಿನ ಸಮಯ ಕಳೆಯತ್ತಿದ್ದಾರೆ. ವಿದ್ಯಾರ್ಥಿಗಳ ಓದಿಗೆ ಯೋಗಾಭ್ಯಾಸ ಪೂರಕವಾಗಲಿದ್ದು ಎಲ್ಲಾ ವಿದ್ಯಾರ್ಥಿಗಳು ಪ್ರತಿದಿನ ಮನೆಯಲ್ಲಿ ಅರ್ಧ ಗಂಟೆ ಯೋಗಾಭ್ಯಾಸ ಮಾಡಿ ಎಂದು ಲಯನ್ಸ್ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕ ಟಿ.ಪಿ ನಂದೀಶ್ ಮಕ್ಕಳಿಗೆ ಕಿವಿಮಾತು ಹೇಳಿದರು.
ಪಟ್ಟಣದ ಲಯನ್ಸ್ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗಾ ದಿನಚರಣೆಯ ಅಂಗವಾಗಿ ಶಾಲಾ ಮಕ್ಕಳ ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಕ್ಕಳು ಓದಿಗೆ ಪೂರಕವಾಗುವ ದಾರಿಗಳನ್ನು ಹುಡುಕಿಕೊಳ್ಳಬೇಕು. ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಇರುವುದರಿಂದ ಆರೋಗ್ಯದ ಕಡೆ ಹೆಚ್ಚು ಗಮನಹರಿಸಬೇಕು ಎಂದು ಸಲಹೆ ನೀಡಿದರು.
ಯೋಗಾಭ್ಯಾಸದಲ್ಲಿ ಮುಖ್ಯ ಶಿಕ್ಷಕರುಗಳಾದ ಎಲ್.ಎಸ್.ಲೋಕೇಶ್, ಜಿ.ರಮೇಶ್, ಶಿಕ್ಷಕರಾದ ಅನಿಲ್ ಕುಮಾರ, ಬಿ.ಎಸ್.ಹರೀಶ್, ಹೆಚ್.ದಿವಾಕರ್, ಸಿ.ರಾಮೇಗೌಡ, ಎ.ಎಸ್.ಅಶ್ವಿನಿ, ನಳಿನಿ, ಆಶಾ, ನಂದಿನಿ. ಸುಜಾತ, ಗಾಯತ್ರಿ, ಎಂಕೆ.ರುಕ್ಮಿಣಿ,ಯೋಗೇಶ್, ವನಾಜಾಕ್ಷಿ, ಬೀಬಿಜಾನ್, ಕೆ.ಆರ್.ವಿನುತ ಇದ್ದರು.
ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕಿ ಪಾರ್ವತಿ ಯೋಗಾಭ್ಯಾಸ ಮಾಡಿಸಿದರು.
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…
ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…
ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…
ಬೆಂಗಳೂರು: ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…
ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…