ಮೈಸೂರು

ಶಾಸ್ತ್ರೀಯ ಕನ್ನಡ ಅತ್ಯುನ್ನತ ಕೇಂದ್ರದ ಅಭಿವೃದ್ಧಿಗೆ ಬೆಂಬಲ : ಕೇಂದ್ರ ಸರ್ಕಾರದ ಭರವಸೆ

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸದಾ ಬೆಂಬಲ ನೀಡಲಿದೆ ಎಂಬ ಭರವಸೆಯನ್ನು ಕೇಂದ್ರ ಶಿಕ್ಷಣ ಸಚಿವರಾದ ಡಾ. ಸುಕಾಂತ ಮಜುಂದಾರ್ ನೀಡಿದ್ದಾರೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಈ ಕುರಿತು ಕೇಳಲಾದ ಪ್ರಶ್ನೆಗೆ ಕೇಂದ್ರ ಶಿಕ್ಷಣ ಸಚಿವರು ಸವಿವರವಾದ ಉತ್ತರ ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದರು ಹಲವಾರು ವಿವರಗಳನ್ನು ಹಂಚಿಕೊಂಡಿದ್ದಾರೆ.

ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ ಪೂರ್ಣ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಸ್ವಾಯತ್ತತೆ ನೀಡಲಾಗಿಲ್ಲ, ಈ ಕೇಂದ್ರದ ಕಾರ್ಯಕ್ಷಮತೆ ಮತ್ತು ಸವಾಲುಗಳು ಹಾಗೂ ಕೇಂದ್ರದ ಸ್ವಾಯತ್ತತೆಗಾಗಿ ರಾಜ್ಯಸರ್ಕಾರ ಅಥವಾ ಕನ್ನಡ ಸಾಹಿತ್ಯ ಸಂಸ್ಥೆಗಳಿಂದ ಶಿಫಾರಸ್ಸುಗಳನ್ನು ಸ್ವೀಕರಿಸಿದೆಯೇ ಮತ್ತು ಇದರ ಸ್ವಾಯತ್ತ ಸ್ಥಾನಮಾನಕ್ಕಾಗಿ ಪ್ರಸ್ತಾಪ ಇದೆಯೇ? ಎಂದು ಕೇಂದ್ರ ಶಿಕ್ಷಣ ಸಚಿವರಿಂದ ಉತ್ತರ ಕೋರಲಾಗಿತ್ತು ಎಂದು ಸಂಸದರು ತಿಳಿಸಿದ್ದಾರೆ.

ಮೈಸೂರಿನಲ್ಲಿರುವ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆಯ (ಸಿಐಐಎಲ್) ಆವರಣದಲ್ಲಿ ಶಾಸ್ತ್ರೀಯ ಕನ್ನಡದ ಅತ್ಯುನ್ನತ ಅಧ್ಯಯನ ಕೇಂದ್ರ (ಸಿಇಎಸ್‌ಸಿಕೆ)ವನ್ನು ಈಗ ಕೋರಿಕೆಯ ಮೇರೆಗೆ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸ್ಥಳಾಂತರಿಸಲಾಗಿದೆ ಎಂದು ಸಚಿವರು ಉತ್ತರ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ – 2020 ಶಾಸ್ತ್ರೀಯ ಕನ್ನಡ ಮತ್ತು ಇತರ ಶಾಸ್ತ್ರೀಯ ಭಾಷೆಗಳನ್ನು ಒಳಗೊಂಡಂತೆ ಎಲ್ಲಾ ಭಾರತೀಯ ಭಾಷೆಗಳ ಪ್ರಚಾರಕ್ಕೆ ಹೆಚ್ಚು ಆದ್ಯತೆ ನೀಡಲು ಗಮನಹರಿಸಲಾಗಿದೆ. ಸಿಇಎಸ್‌ಸಿಕೆ ಸೇರಿದಂತೆ ಎಲ್ಲಾ ಶಾಸ್ತ್ರೀಯ ಕೇಂದ್ರಗಳ ಕಾರ್ಯಕ್ಷಮತೆಯನ್ನು ವ್ಯವಸ್ಥಿತವಾಗಿ ಪರಿಶೀಲಿಸಲು ಮತ್ತು ನಿರ್ಣಯಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಲಾಗಿದೆ. ಶಾಸ್ತ್ರೀಯ ಕನ್ನಡದ ಅತ್ಯುನ್ನತ ಅಧ್ಯಯನ ಕೇಂದ್ರದ ಬೆಳವಣಿಗೆಗೆ ಬೆಂಬಲ ನೀಡಲಾಗುತ್ತದೆ. ಕೇಂದ್ರದ ವಽತ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸದಾ ಬದ್ಧವಾಗಿದೆ ಎಂದು ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ

ಆಂದೋಲನ ಡೆಸ್ಕ್

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

2 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

3 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

3 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

3 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

3 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

4 hours ago