ಮೈಸೂರು: ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ದೇಶದ ಪ್ರಧಾನಿ ಮಾಡಲು ನೀವು ನನ್ನನ್ನು ಬೆಂಬಲಿಸಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದರು.
ಸರಸ್ವತಿಪುರಂನಲ್ಲಿರುವ ರಾಜ್ಯ ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಎಂ.ಅಪ್ಪಣ್ಣ ಅವರ ಕಚೇರಿಗೆ ಬಿಜೆಪಿ ಮುಖಂಡರೊಂದಿಗೆ ಭೇಟಿ ನೀಡಿ ಬೆಂಬಲ ಕೋರಿದರು.
ಅರಮನೆಗೂ ನಾಯಕ ಸಮುದಾಯದವರಿಗೂ ಅವಿನಭಾವ ಸಂಬಂಧವಿದೆ. ಮಹಾರಾಜರ ಕಾಲದಿಂದಲೂ ಅರಮನೆಯವರಿಗೆ ಬೆಂಬಲ ನೀಡುತ್ತಲೇ ಬಂದಿದ್ದೀರಿ. ಈ ಬಾರಿ ನಾನು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿದ್ದೇನೆ. ಎಲ್ಲರೂ ಸಹಕಾರ ನೀಡಬೇಕು ಎಂದರು.
ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಎಂ ರಾಜೇಂದ್ರ, ಚುನಾವಣಾ ಸಂಚಾಲಕ ಮೈ.ವಿ ರವಿಶಂಂಕರ್, ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಎಲ್.ಆರ್ ಮಹದೇವಸ್ವಾಮಿ, ಮುಖಂಡರಾದ ಎಸ್ ಮಹದೇವಯ್ಯ, ಶಬರೀಶ್, ಮಹೇಶ್, ವಸಂತಕುಮಾರ್, ಪ್ರಭಾಕರ್, ರಾಜು, ಸುರೇಶ್, ನಾಗೇಂದ್ರ ಹಾಗೂ ನಾಯಕ ಸಮಾಜದ ಮುಖಂಡರು ಹಾಜರಿದ್ದರು
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…