ಮೈಸೂರು: ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಮೈಸೂರಿನ ವಲ್ಲಭಭಾಯಿ ನಗರದ ನಿವಾಸಿ ಸುಪ್ರಿತಾ ಸಿ.ಟಿ ಅವರು ಆಯ್ಕೆಯಾಗಿದ್ದಾರೆ.
ಸುಪ್ರಿತಾ ಪ್ರಸ್ತುತ ಭಾರತೀಯ ವಾಯುಸೇನೆಯ ಕ್ಯಾಪ್ಟನ್ ಆಗಿದ್ದು, ಇದೀಗ ಸಿಯಾಚಿನ್ ಯುದ್ಧಭೂಮಿಗೆ ಆಯ್ಕೆಯಾಗಿದ್ದಾರೆ. ಈ ಮೂಲಕ ಸಿಯಾಚಿನ್‌ಗೆ ಆಯ್ಕೆಯಾದ ದೇಶದ ಮೊದಲ ಮಹಿಳಾ ಯೋಧೆಯಾಗಿದ್ದಾರೆ. ಈ ಮಾಹಿತಿಯನ್ನು ಸೇನೆಯು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಖಚಿತಪಡಿಸಿದೆ.
ತಲಕಾಡು ಪೊಲೀಸ್ ಠಾಣೆಯ ಪಿಎಸ್‌ಐ ತಿರುಮಲ್ಲೇಶ್ ಹಾಗೂ ನಿರ್ಮಲ ದಂಪತಿ ಪುತ್ರಿಯಾದ ಸುಪ್ರಿತಾ, ಮೈಸೂರಿನ ಜೆಎಸ್‌ಎಸ್ ಕಾನೂನು ಕಾಲೇಜಿನಲ್ಲಿ ಪದವಿ ಹಾಗೂ ಎನ್‌ಸಿಸಿ ಯಲ್ಲಿ ʻಸಿʼ ಸರ್ಟಿಫಿಕೇಟ್ ಪಡೆದಿದ್ದಾರೆ.
2021ರಲ್ಲಿ ಸೇನಾ ಪಡೆಯ ಲೆಫ್ಟಿನೆಂಟ್ ಆಗಿ ತರಬೇತಿ ಪಡೆದು ಭಾರತೀಯ ವಾಯುಪಡೆಗೆ ನಿಯೋಜನೆಗೊಂಡಿದ್ದರು. ಆನಂತರ 2024 ರಲ್ಲಿ ಅನಂತನಾಗ್, ಜಬ್ಬಾಲ್ಬರ್, ಲೇಹ್‌ನಲ್ಲಿ ಕರ್ತವ್ಯ ನಿರ್ವಹಣೆಯ ಬಳಿಕ ಕಠಿಣ ತರಬೇತಿಯಲ್ಲಿ ತೇರ್ಗಡೆಯಾಗಿ ಸಿಯಾಚಿನ್ ಯುದ್ಧಭೂಮಿಗೆ ಆಯ್ಕೆಯಾಗಿದ್ದಾರೆ.
ಕುವೆಂಪು ಮಲೆನಾಡಿನಲಿ ಹುಟ್ಟಿದರು ಮೈಸೂರಿಗೆ ಕಾಲಿಟ್ಟರು ಕವಿಯಾಗಿ ಕನ್ನಡದ ಮೊದಲ ಜ್ಞಾನಪೀಠ ಗಳಿಸಿದರು ಮೂಢನಂಬಿಕೆಯನು ಬದಿಗೊತ್ತಿ ವಿಜ್ಞಾನದ ಬೀಜ ಬಿತ್ತಿ…
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್‌ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ…
ಹೆಗ್ಗಡದೇವನಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದಿಂದ ಜಿನ್ನಹಳ್ಳಿ -ಮಲಾರದಹುಂಡಿಗೆ ತೆರಳುವ ಮುಖ್ಯ ರಸ್ತೆ ಹಾಳಾಗಿದ್ದು, ವಿಪರೀತ ಹಳ್ಳ-ಕೊಳ್ಳಗಳಿಂದ ಕೂಡಿದೆ. ಹಲವಾರು ಬಾರಿ…
ಹೊಸ ವರ್ಷದ ಆಚರಣೆ ಡಿ.೩೧ರ ರಾತ್ರಿ ಮತ್ತು ಜನವರಿ ೧ ರಂದು ನಡೆಯುತ್ತದೆ. ಯುವ ಜನತೆಗೆ ಹೊಸ ವರ್ಷದ ಆಚರಣೆ…
ಡಾ.ಪಿ.ಮಂಜುನಾಥ ನಕಾರಾತ್ಮಕ ಭಾವನೆ ಮಕ್ಕಳಲ್ಲಿ ಮೂಡದಂತೆ ಎಚ್ಚರ ಅಗತ್ಯ ಪರೀಕ್ಷೆಗಳು ಕೆಲವೇ ತಿಂಗಳುಗಳಲ್ಲಿ ಸಾಲು ಸಾಲಾಗಿ ಪ್ರಾರಂಭವಾಗಲಿವೆ. ಪರೀಕ್ಷೆ ಹತ್ತಿರವಾಗುತ್ತಿದ್ದಂತೆ…
೨೦೨೫ ನೇ ಸಾಲಿನಲ್ಲಿ ಹಲವಾರು ಸಾಧಕರು ಹೊರಹೊಮ್ಮಿದ್ದು, ಸಾಹಿತ್ಯ, ಕಲೆ, ವಿಜ್ಞಾನ, ಸಂಶೋಧನೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ,…