ಮೈಸೂರು: ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಮೈಸೂರಿನ ವಲ್ಲಭಭಾಯಿ ನಗರದ ನಿವಾಸಿ ಸುಪ್ರಿತಾ ಸಿ.ಟಿ ಅವರು ಆಯ್ಕೆಯಾಗಿದ್ದಾರೆ.
ಸುಪ್ರಿತಾ ಪ್ರಸ್ತುತ ಭಾರತೀಯ ವಾಯುಸೇನೆಯ ಕ್ಯಾಪ್ಟನ್ ಆಗಿದ್ದು, ಇದೀಗ ಸಿಯಾಚಿನ್ ಯುದ್ಧಭೂಮಿಗೆ ಆಯ್ಕೆಯಾಗಿದ್ದಾರೆ. ಈ ಮೂಲಕ ಸಿಯಾಚಿನ್‌ಗೆ ಆಯ್ಕೆಯಾದ ದೇಶದ ಮೊದಲ ಮಹಿಳಾ ಯೋಧೆಯಾಗಿದ್ದಾರೆ. ಈ ಮಾಹಿತಿಯನ್ನು ಸೇನೆಯು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಖಚಿತಪಡಿಸಿದೆ.
ತಲಕಾಡು ಪೊಲೀಸ್ ಠಾಣೆಯ ಪಿಎಸ್‌ಐ ತಿರುಮಲ್ಲೇಶ್ ಹಾಗೂ ನಿರ್ಮಲ ದಂಪತಿ ಪುತ್ರಿಯಾದ ಸುಪ್ರಿತಾ, ಮೈಸೂರಿನ ಜೆಎಸ್‌ಎಸ್ ಕಾನೂನು ಕಾಲೇಜಿನಲ್ಲಿ ಪದವಿ ಹಾಗೂ ಎನ್‌ಸಿಸಿ ಯಲ್ಲಿ ʻಸಿʼ ಸರ್ಟಿಫಿಕೇಟ್ ಪಡೆದಿದ್ದಾರೆ.
2021ರಲ್ಲಿ ಸೇನಾ ಪಡೆಯ ಲೆಫ್ಟಿನೆಂಟ್ ಆಗಿ ತರಬೇತಿ ಪಡೆದು ಭಾರತೀಯ ವಾಯುಪಡೆಗೆ ನಿಯೋಜನೆಗೊಂಡಿದ್ದರು. ಆನಂತರ 2024 ರಲ್ಲಿ ಅನಂತನಾಗ್, ಜಬ್ಬಾಲ್ಬರ್, ಲೇಹ್‌ನಲ್ಲಿ ಕರ್ತವ್ಯ ನಿರ್ವಹಣೆಯ ಬಳಿಕ ಕಠಿಣ ತರಬೇತಿಯಲ್ಲಿ ತೇರ್ಗಡೆಯಾಗಿ ಸಿಯಾಚಿನ್ ಯುದ್ಧಭೂಮಿಗೆ ಆಯ್ಕೆಯಾಗಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…