Mysore
31
few clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

ಒಂಟಿ ದಂತದ ಆನೆ ಅನುಮಾನಾಸ್ಪದ ಸಾವು

ಸರಗೂರು : ತಾಲೂಕಿನ ಕೊತ್ತೇಗಾಲ ಗ್ರಾಮದ ನಾಗಪ್ಪ ಬಿನ್ ಮಾದಪ್ಪ ಅವರ ಜಮೀನಿನಲ್ಲಿ ಶುಕ್ರವಾರ ಒಂಟಿ ದಂತದ ಆನೆಯೊಂದು ಅನುಮಾನಾಸ್ಪದವಾಗಿ ಮೃತಪಟ್ಟಿದೆ. ವಿಷಯ ತಿಳಿದು ಸ್ಥಳಕ್ಕೆ ಸರಗೂರು ವಲಯದ ವಲಯ ಅರಣ್ಯಾಧಿಕಾರಿ ಎಸ್.ಹನುಮಂತರಾಜು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎಚ್.ಡಿ.ಕೋಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಲಕ್ಷ್ಮೀಕಾಂತ್‌ ಸಮಕ್ಷಮ ಬಂಡಿಪುರ ವಿಭಾಗದ ಪಶು ವೈದ್ಯಾಧಿಕಾರಿ ಮಿರ್ಜಾ ವಾಸಿಂ ಮರಣೋತ್ತರ ಪರೀಕ್ಷೆ ನಡೆಸಿದರು.

ವೈದ್ಯರ ಹೇಳಿಕೆಯಂತೆ ಗಂಡಾನೆಗೆ ಅಂದಾಜು 20 ವರ್ಷವಾಗಿದೆ ಎನ್ನಲಾಗಿದೆ. ಆನೆಯ ಮೃತದೇಹವನ್ನು ಸ್ಥಳದಲ್ಲೇ ಹೂಳಲಾಯಿತು. ಆನೆಯದು ಅನುಮಾನಾಸ್ಪದ ಸಾವು ಎಂದು ವಲಯ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಮೈಸೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್.ಬಸವರಾಜ್ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ