ಸರಗೂರು : ತಾಲೂಕಿನ ಕೊತ್ತೇಗಾಲ ಗ್ರಾಮದ ನಾಗಪ್ಪ ಬಿನ್ ಮಾದಪ್ಪ ಅವರ ಜಮೀನಿನಲ್ಲಿ ಶುಕ್ರವಾರ ಒಂಟಿ ದಂತದ ಆನೆಯೊಂದು ಅನುಮಾನಾಸ್ಪದವಾಗಿ ಮೃತಪಟ್ಟಿದೆ. ವಿಷಯ ತಿಳಿದು ಸ್ಥಳಕ್ಕೆ ಸರಗೂರು ವಲಯದ ವಲಯ ಅರಣ್ಯಾಧಿಕಾರಿ ಎಸ್.ಹನುಮಂತರಾಜು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎಚ್.ಡಿ.ಕೋಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಲಕ್ಷ್ಮೀಕಾಂತ್ ಸಮಕ್ಷಮ ಬಂಡಿಪುರ ವಿಭಾಗದ ಪಶು ವೈದ್ಯಾಧಿಕಾರಿ ಮಿರ್ಜಾ ವಾಸಿಂ ಮರಣೋತ್ತರ ಪರೀಕ್ಷೆ ನಡೆಸಿದರು.
ವೈದ್ಯರ ಹೇಳಿಕೆಯಂತೆ ಗಂಡಾನೆಗೆ ಅಂದಾಜು 20 ವರ್ಷವಾಗಿದೆ ಎನ್ನಲಾಗಿದೆ. ಆನೆಯ ಮೃತದೇಹವನ್ನು ಸ್ಥಳದಲ್ಲೇ ಹೂಳಲಾಯಿತು. ಆನೆಯದು ಅನುಮಾನಾಸ್ಪದ ಸಾವು ಎಂದು ವಲಯ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಮೈಸೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್.ಬಸವರಾಜ್ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.
ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…
ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…