ಮೈಸೂರು: ನಾಳೆಯಿಂದ ಜನವರಿ.31ರವರೆಗೆ ಶ್ರೀಕ್ಷೇತ್ರ ಸುತ್ತೂರಿನಲ್ಲಿ ಅದ್ಧೂರಿಯಾಗಿ ಜಾತ್ರಾ ಮಹೋತ್ಸವ ನಡೆಯಲಿದ್ದು, ಇಂದು ಮಹಾದಾಸೋಹಕ್ಕೆ ಅಧಿಕೃತ ಚಾಲನೆ ದೊರೆಯಿತು.
ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಇಂದು ಆದಿಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿಗಳವರ ಜಾತ್ರಾ ಮಹೋತ್ಸವ ಪ್ರಯುಕ್ತ ಕರ್ತೃ ಗದ್ದುಗೆಗೆ ಪೂಜೆ ಸಲ್ಲಿಸಿ “ಮಹಾ ದಾಸೋಹ”ಕ್ಕೆ ಅಧಿಕೃತ ಚಾಲನೆ ನೀಡಿದರು.
ಸುತ್ತೂರು ಜಾತ್ರೆಯಲ್ಲಿ ನಿತ್ಯ ೩ ಲಕ್ಷದಂತೆ ೨೦ ಲಕ್ಷಕ್ಕೂ ಹೆಚ್ಚು ಮಂದಿಗೆ ಪ್ರಸಾದ ವಿನಿಯೋಗ ವ್ಯವಸ್ಥೆ ಮಾಡಲಾಗಿದೆ. ಆರು ದಿನಗಳ ಕಾಲ ಪ್ರತಿದಿನ ಪ್ರಸಾದ ವ್ಯವಸ್ಥೆ ಇದ್ದು, ವಿಐಪಿ, ಸಾರ್ವಜನಿಕರು, ಮಠಾಧೀಶರು, ಸ್ವಯಂಸೇವಕರು ಹಾಗೂ ಕ್ರೀಡಾಪಟುಗಳಿಗೆ 5 ಕಡೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.
ಸುಮಾರು 500 ಮಂದಿ ಬಾಣಸಿಗರು ಅಡುಗೆ ತಯಾರಿಸಲಿದ್ದು, ಐದು ಸಾವಿರ ಸ್ವಯಂ ಸೇವಕರು ಊಟ ಬಡಿಸುವ ಕಾರ್ಯ ನಿರ್ವಹಿಸಲಿದ್ದಾರೆ.