ಮೈಸೂರು: ಸಾವಿರಾರು ಮಂದಿ ಜಯಘೋಷಗಳೊಂದಿಗೆ ಶಿವರಾತ್ರೀಶ್ವರ ಶಿವಯೋಗಿಗಳ ರಥೋತ್ಸವ ಇಂದು ಬೆಳಿಗ್ಗೆ ಅದ್ಧೂರಿಯಾಗಿ ನೆರವೇರಿತು.
ಸುತ್ತೂರಿನ ಕತೃಗದ್ದುಗೆಯ ಆವರಣದಲ್ಲಿ ಜಮಾಯಿಸಿದ್ದ ಸಾವಿರಾರು ಸಾರ್ವಜನಿಕರು ಹೆಬ್ಬಾವಿನ ಗಾತ್ರದ ರಥದ ಹಗ್ಗವನ್ನು ಎಳದು ಹರಕೆ ತೀರಿಸಿದರು. ಬಳಿಕ ರಥಕ್ಕೆ ಹಣ್ಣು-ಜವನ ಎಸೆದು ರಥಕ್ಕೆ ನಮಿಸಿದರು.
ತಮಟೆ, ನಗಾರಿ ವಾದ್ಯಗಳ ನಾದ ಮುಗಿಲುಮುಟ್ಟಿತು. ಸುತ್ತೂರು ಮೂಲಮಠದವರೆಗೂ ಭಕ್ತರು ರಥದೊಂದಿಗೆ ಹೆಜ್ಜೆ ಹಾಕಿದರು.
ರಥೋತ್ಸವದದ ಮೆರವಣಿಗೆಯಲ್ಲಿ ಸಾಗಿದ ಹಲವು ಕಲಾತಂಡಗಳು ಮೈಸೂರು ದಸರೆಯನ್ನು ನೆನಪಿಸಿದವು.
ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಸಮ್ಮುಖದಲ್ಲಿ ನಡೆದ ರಥೋತ್ಸವದಲ್ಲಿ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಸೇರಿದಂತೆ ಹಲವು ರಾಜಕೀಯ ನಾಯಕರು ಭಾಗಿಯಾಗಿದ್ದರು.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…