ಮೈಸೂರು: ಜನರಲ್ಲಿ ಸ್ವಚ್ಛತೆಯ ಕುರತು ಜಾಗೃತಿ ಮೂಡಿಸಲು ‘ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಆಂದೋಲನ-2025’ ಕಾರ್ಯಕ್ರಮವನ್ನು ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಆಯೋಜಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಎಸ್. ಯುಕೇಶ್ ಕುಮಾರ್ ತಿಳಿಸಿದ್ದಾರೆ.
ಈ ಪಾಕ್ಷಿಕ ಆಂದೋಲನ ಕಾರ್ಯಕ್ರಮದ ಅಂಗವಾಗಿ ಹಳ್ಳಿಗಳಲ್ಲಿ ಸ್ವಚ್ಛತೆ ಕಾಪಾಡಲು ಶ್ರಮದಾನ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದರ ಮೂಲಕ ಗ್ರಾಮದ ಪ್ರಮುಖ ಬೀದಿ, ಶಾಲಾ ಆವರಣ, ಆಟದ ಮೈದಾನ, ಜಲಮೂಲಗಳು, ಧಾರ್ಮಿಕ ಕೇಂದ್ರಗಳ ಸಮೀಪ ಸ್ವಚ್ಛತಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಗ್ರಾಮದ ಅತ್ಯಂತ ಹೆಚ್ಚು ತ್ಯಾಜ್ಯ ಸಂಗ್ರಹವಾಗುವ ಪ್ರದೇಶ ಮತ್ತು ಅಧಿಕ ಅನೈರ್ಮಲ್ಯ ಇರುವ ಸ್ಥಳಗಳನ್ನು ಗುರತಿಸಿ ಶ್ರಮದಾನ ಮಾಡುವ ಮೂಲಕ ಸಂಪೂರ್ಣ ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳಬೇಕು.
ಶೌಚಾಲಯ ಬಳಕೆ ಕುರಿತು ಪ್ರಭಾತ್ ಪೇರಿ ಚಟುವಟಿಕೆ, ಸಫಾಯಿ ಮಿತ್ರ ಸುರಕ್ಷಾ ಶಿಬಿರ, ಶಾಲಾ ಮಕ್ಕಳಲ್ಲಿ ಸ್ಲೋಗನ್ ಬರೆಯುವ ಸ್ಪರ್ಧೆ, ಸ್ವಚ್ಛತಾ ಕಾರ್ಮಿಕರಿಗೆ ಸನ್ಮಾನ ಮತ್ತು ಓಡಿಎಪ್ ಪ್ಲಸ್ ಸುಸ್ಥಿರತೆ ಅಂಶಗಳ ಕುರಿತು ಗ್ರಾಮ ಪಂಚಾಯಿತಿ ಅಧ್ಯಕ್ಷರೊಂದಿಗೆ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಹಾಗೂ ವಿಶೇಷ ಗ್ರಾಮ ಸಭೆಗಳನ್ನು ಆಯೋಜಿಸಿ ಸ್ವಚ್ಛತಾ ಪ್ರತಿಜ್ಞಾ ವಿಧಿ ಬೋಧಿಸಬೇಕು ಎಂದರು.
ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಾಲಯಗಳನ್ನು ಗುರುತಿಸಿ ಸ್ವಚ್ಛತಾ ಅಭಿಯಾನ ಕೈಗೊಳ್ಳಬೇಕು. ಗ್ರಾಮೀಣ ಪ್ರದೇಶದಲ್ಲಿ ಉತ್ಪತ್ತಿಯಾಗುವ ಕಸವನ್ನು ಸಂಪನ್ಮೂಲವನ್ನಾಗಿ ಪರಿವರ್ತಿಸುವ ಕುರಿತಂತೆ ಸ್ವ ಸಹಾಯ ಸಂಘದ ಸದಸ್ಯರಿಗೆ ಅರಿವು ಮೂಡಿಸುವ ಚುವಟಿಕೆಗಳನ್ನು ಕೈಗೊಳ್ಳಬೇಕು, ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಸ್ವಚ್ಛತಾ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಬೇಕು ಹಾಗೂ ವಿವಿಧ ಇಲಾಖೆಗಳಿಂದ ದೊರೆಯುವ ಸೌಲಭ್ಯಗಳ ಕುರಿತಂತೆ ಅವರಿಗೆ ಮಾಹಿತಿ ನೀಡಬೇಕು ಎಂದರು.
25ನೇ ಸೆಪ್ಟೆಂಬರ್ ರಂದು ಒಂದು ದಿನ, ಒಂದು ಗಂಟೆ ಎಲ್ಲರೂ ಒಟ್ಟಿಗೆ ಶ್ರಮದಾನ (ಏಕ್ ದಿನ್, ಏಕ್ ಘಂಟಾ, ಏಕ್ ಸಾಥ್) ಎಂಬ ಘೋಷವಾಕ್ಯದಡಿ ಸಾಮೂಹಿಕ ಶ್ರಮದಾನವನ್ನು ಏಕಕಾಲದಲ್ಲಿ ಹಮ್ಮಿಕೊಳ್ಳಲಾಗುವುದು. ಸ್ವಚ್ಛತೆಗಾಗಿ ನಾಗರೀಕರು ಕೈಜೋಡಿಸಬೇಕೆಂದು ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮವನ್ನು ಅತ್ಯಂತ ಪರಿಣಾಮಕಾರಿಯಾಗಿ ಆಚರಿಸಲು, ಆರೋಗ್ಯ ಇಲಾಖೆ, ಅರಣ್ಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದ್ದಾರೆ.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…