ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಂಗಳವಾರ(ಏ.೨೩) ನಂಜನಗೂಡು ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಅಧಿಕಾರಿಗಳು ಬೈಕ್ ಜಾಥಾ ಮೂಲಕ ಕಡ್ಡಾಯ ಮತದಾನದ ಅರಿವು ಮೂಡಿಸಿದರು.
ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಜಗನಾಥ್ ಮೂರ್ತಿ ಮಾತನಾಡಿ, ಮತದಾನವನ್ನು ಕಡ್ಡಾಯವಾಗಿ ಮಾಡಬೇಕು, ಮತ ಚಲಾಯಿಸುವುದು ಸಂವಿಧಾನದ ಹಕ್ಕಾಗಿದ್ದು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ವ್ಯಕ್ತಿಯು ಮತದಾನ ಪ್ರಕ್ರಿಯೆಯಿಂದ ಹೊರಗುಳಿಯಬಾರದು ಎಂದರು.
ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಮತದಾನ ಘೋಷವಾಕ್ಯಗಳ ಫಲಕ ಹಿಡಿದು ದ್ವಿಚಕ್ರ ವಾಹನ ಏರಿ ತಾಲ್ಲೂಕು ಪಂಚಾಯಿತಿಯಿಂದ ಅಂಬೇಡ್ಕರ್ ವೃತ್ತ, ಶ್ರೀಕಂಠೇಶ್ವರ ದೇವಸ್ತಾನ, ಎಂ.ಜಿ.ರಸ್ತೆ, ಮಾರುಕಟ್ಟೆ ರಸ್ತೆ, ದೇವಿರಮ್ಮನಹಳ್ಳಿ ಗೇಟ್ ಸರ್ಕಲ್ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಏಪ್ರಿಲ್ 26 ರಂದು ತಪ್ಪದೇ ಮತ ಚಲಾಯಿಸುವಂತೆ ಪ್ರೇರೇಪಿಸಿದರು.
ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ, ಸಹಾಯಕ ನಿರ್ದೇಶಕ ಶಿವಕುಮಾರ್, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿ ಸಿಬ್ಬಂದಿಗಳು ಹಾಜರಿದ್ದರು.
ಬೆಂಗಳೂರು : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮಹಾಕುಸಿತ ಮುಂದುವರಿದಿದೆ. ಶುಕ್ರವಾರ ಗ್ರಾಮ್‌ಗೆ 800 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ…
ಬೆಂಗಳೂರು : ಖ್ಯಾತ ಉದ್ಯಮಿ ಮತ್ತು ಕಾನ್ಛಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ…
ಮೈಸೂರು : ನಗರದಲ್ಲಿ ಕೋಟ್ಯಾಂತರ ರೂ. ಮೊತ್ತದ ಡ್ರಗ್ಸ್ ತಯಾರಿಕೆ ನಡೆಯುತ್ತಿದ್ದರೂ ಪತ್ತೆ ಹಚ್ಚುವಲ್ಲಿ ನಗರದ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ…
ಮುಂಬೈ : ಮಹಾರಾಷ್ಟ್ರದ ರಾಜಕೀಯದಲ್ಲಿ ಒಂದು ಐತಿಹಾಸಿಕ ಕ್ಷಣ. ಎನ್‌ಸಿಪಿ ನಾಯಕಿ ದಿ.ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್…
ಹನೂರು : ದಂಟಳ್ಳಿ ಏತ ನೀರಾವರಿ ಯೋಜನೆಗೆ ಡಿ.ಪಿ.ಆರ್ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಯುವ…
ಮೈಸೂರು : ಮೈಸೂರಿನಲ್ಲಿ ವ್ಯಾಪಕ ಕಾರ್ಯಾಚರಣೆ ನಡೆಸಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಸುಮಾರು 10 ಕೋಟಿ ರೂ. ಮೌಲ್ಯದ…