Mysore
26
broken clouds
Light
Dark

ಮೇ.21 ರಂದು ವಿಚಾರ ಸಂಕಿರಣ ಉದ್ಘಾಟನ ಕಾರ್ಯಕ್ರಮ

ಮೈಸೂರು: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ರಾಜ್ಯ ಸಂವಹನ ಮತ್ತು ಪತ್ರಿಕೋದ್ಯಮ ಶಿಕ್ಷಕರ ಸಂಘದ ಸಹಯೋಗದೊಂದಿಗೆ ಮೇ.21 ರಂದು ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಲ್ಲಿ “ಪ್ರದರ್ಶನ ಕಲೆ ಮತ್ತು ಮಾಧ್ಯಮ: ಸಾಂಸ್ಕೃತಿಕ ದೃಷ್ಟಿಕೋನಗಳು” ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಸಮಾರಂಭವನ್ನು ಸಂಗೀತ ನಿರ್ದೇಶಕರು ಹಾಗೂ ಜಾನಪದ ವಿದ್ವಾಂಸರಾದ ಹಂಸಲೇಖ ಅವರು ಉದ್ಘಾಟಿಸಲಿದ್ದು, ಕೆ.ಎಸ್.ಜಿ.ಹೆಚ್.ಎಂ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ನಾಗೇಶ್ ವಿ ಬೆಟ್ಟಕೋಟೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಯು ಎಸ್ ಎ ನ ಬ್ರಾಂಡೈಸ್ ವಿಶ್ವವಿದ್ಯಾಲಯದ ವಾಲ್ತಂ ಪ್ರೊ. ಗೌರಿ ವಿಜಯಕುಮಾರ್, ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಕೆ ರವಿ, ಕೆಎ   ವಿಶ್ವವಿದ್ಯಾಲಯದ ಕುಲಸಚಿವರಾದ ರೇಖಾ ಕೆ.ಎಸ್ ಅವರು ಮುಖ್ಯ ಭಾಷಣಕಾರರಾಗಿ ಭಾಗವಹಿಸುವರು.

ಮೇ.22 ರಂದು ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಲಿದ್ದು, ಕರ್ನಾಟಕ ಸಂಗೀತ ಶಿಕ್ಷಣ ತಜ್ಞರು ಹಾಗೂ ಮಾಜಿ ಎನ್ಎಸಿಸಿ ನಿರ್ದೇಶಕರಾದ ಪ್ರೊ.ಎಸ್.ಸಿ ಶವið ಅವರು ಸಮಾರೋಪ ಸಮಾರಂಭದ ಭಾಷಣ ಮಾಡಲಿದ್ದಾರೆ.