ಮೈಸೂರು: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ರಾಜ್ಯ ಸಂವಹನ ಮತ್ತು ಪತ್ರಿಕೋದ್ಯಮ ಶಿಕ್ಷಕರ ಸಂಘದ ಸಹಯೋಗದೊಂದಿಗೆ ಮೇ.21 ರಂದು ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಲ್ಲಿ “ಪ್ರದರ್ಶನ ಕಲೆ ಮತ್ತು ಮಾಧ್ಯಮ: ಸಾಂಸ್ಕೃತಿಕ ದೃಷ್ಟಿಕೋನಗಳು” ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಸಮಾರಂಭವನ್ನು ಸಂಗೀತ ನಿರ್ದೇಶಕರು ಹಾಗೂ ಜಾನಪದ ವಿದ್ವಾಂಸರಾದ ಹಂಸಲೇಖ ಅವರು ಉದ್ಘಾಟಿಸಲಿದ್ದು, ಕೆ.ಎಸ್.ಜಿ.ಹೆಚ್.ಎಂ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ನಾಗೇಶ್ ವಿ ಬೆಟ್ಟಕೋಟೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಯು ಎಸ್ ಎ ನ ಬ್ರಾಂಡೈಸ್ ವಿಶ್ವವಿದ್ಯಾಲಯದ ವಾಲ್ತಂ ಪ್ರೊ. ಗೌರಿ ವಿಜಯಕುಮಾರ್, ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಕೆ ರವಿ, ಕೆಎ ವಿಶ್ವವಿದ್ಯಾಲಯದ ಕುಲಸಚಿವರಾದ ರೇಖಾ ಕೆ.ಎಸ್ ಅವರು ಮುಖ್ಯ ಭಾಷಣಕಾರರಾಗಿ ಭಾಗವಹಿಸುವರು.
ಮೇ.22 ರಂದು ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಲಿದ್ದು, ಕರ್ನಾಟಕ ಸಂಗೀತ ಶಿಕ್ಷಣ ತಜ್ಞರು ಹಾಗೂ ಮಾಜಿ ಎನ್ಎಸಿಸಿ ನಿರ್ದೇಶಕರಾದ ಪ್ರೊ.ಎಸ್.ಸಿ ಶವið ಅವರು ಸಮಾರೋಪ ಸಮಾರಂಭದ ಭಾಷಣ ಮಾಡಲಿದ್ದಾರೆ.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್‌ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…