ಮೈಸೂರು

ಸಮಾಜಿಕ ಬಹಿಷ್ಕಾರ ಪದ್ದತಿಯನ್ನು ಬೇರು ಸಮೇತವಾಗಿ ಕೀಳಬೇಕು-ಶ್ಯಾಂಭಟ್

ಮೈಸೂರು: ನಾಗರಿಕ ಸಮಾಜದಲ್ಲಿ ಸಮಾಜಿಕ ಬಹಿಷ್ಕಾರ ಎನ್ನುವ ಅನಿಷ್ಟ ಪದ್ದತಿ ಬುಡ ಸಮೇತ ತೆಗೆದು ಹಾಕಬೇಕೆಂದು ಮನವ ಹಕ್ಕುಗಳ ಅಯೋಗದ ಅಧ್ಯಕ್ಷರಾದ ಶ್ಯಾಂಭಟ್ ಹೇಳಿದರು.

ಇಂದು ನಂಜನಗೂಡಿನ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ, ಸಾಮಾಜಿಕ ಬಹಿಷ್ಕಾರ ಘಟನೆಗಳ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಮಾಜಿಕ ಬಹಿಷ್ಕಾರದಂತಹ ಪ್ರಕರಣಗಳು ಕಂಡುಬಂದಲ್ಲಿ ಅವುಗಳನ್ನು ಪತ್ರಿಕೆಗಳು, ಸುದ್ದಿ ವಾಹಿನಿಗಳಲ್ಲಿ ಹೆಚ್ಚಾಗಿ ಪ್ರಕಟಿಸುವ ಮೂಲಕ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಇದರ ವಿದುದ್ದ ತೆಗೆದುಕೊಂಡಂತಹ ಕ್ರಮಗಳ ಬಗ್ಗೆ ಹೆಚ್ಚು ಪ್ರಕಟಿಸುವ ಮೂಲಕ ಜನರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.

ಸಾಮಾಜಿಕ ಬಹಿಷ್ಕಾರ ಎಂಬ ಪಿಡುಗು ತೊಲಗಬೇಕು ಇದನ್ನು ಬುಡ ಸಮೇತ ಕೀಳಲು ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಿ ಮುಖ್ಯವಾಗಿ ತಹಸಿಲ್ದಾರ್ ಸಿಡಿಪಿಓ ಮತ್ತು ಪೊಲೀಸ್ ಇಲಾಖೆಯವರು ಇದರ ಬಗ್ಗೆ ಹೆಚ್ಚಾಗಿ ಗಮನ ವಹಿಸಬೇಕು. ಇಂತಹ ಘಟನೆ ಸಂಭವಿಸಿದಲ್ಲಿ ಕೂಡಲೇ ಕ್ರಮ ವಹಿಸಿ ನಮ್ಮ ಗಮನಕ್ಕೆ ತರಬೇಕು ಎಂದು ಸೂಚನೆ ನೀಡಿದರು.

ಸಾಮಾಜಿಕ ಬಹಿಷ್ಕಾರದ ದೂರಿನ ಹಿನ್ನೆಲೆ ಕಂದೇಗಾಲ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದವರು. ಗ್ರಾಮದಲ್ಲಿ ಬಹಿಷ್ಕಾರವನ್ನು ಹಾಕಿರುವಂತಹ ವಾತಾವರಣ ಕಾಣುತಿಲ್ಲ ಒಂದು ವೇಳೆ ಅಂತಹ ಬೆಳವಣಿಗೆಗಳಾದರೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ವೆಂಟಿಗೋಡಿ, ನಂಜನಗೂಡು ಉಪ ವಿಭಾಗೀಯ ಡಿ ವೈ ಎಸ್ ಪಿ ರಘು, ತಾಲೂಕು ದಂಡಾಧಿಕಾರಿ ಶಿವಕುಮಾರ್, ಕಾಸನೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್, ನಗರಸಭೆ ಆಯುಕ್ತ ನಂಜುಂಡಸ್ವಾಮಿ, ಸಿಡಿಪಿಓಗಳಾದ ಭವ್ಯಶ್ರೀ ಮತ್ತು ಮಂಜುಳಾ ‌ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

27 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

32 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

41 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago