Mysore
33
scattered clouds

Social Media

ಭಾನುವಾರ, 20 ಏಪ್ರಿಲ 2025
Light
Dark

ಟಿ.ನರಸೀಪುರ| ಅಪಘಾತದ ವೇಳೆ ನದಿಗೆ ಬಿದ್ದಿದ್ದ ತಾಯಿಯ ಮೃತದೇಹ ಪತ್ತೆ

ಟಿ.ನರಸೀಪುರ: ಬೈಕ್‌ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು, ತಾಯಿ ನದಿಪಾಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ತೀವ್ರ ಶೋಧ ಕಾರ್ಯಾಚರಣೆ ಬಳಿಕ ತಾಯಿಯ ಮೃತದೇಹ ಪತ್ತೆಯಾಗಿದೆ.

ಬನ್ನೂರು ಮುಖ್ಯ ರಸ್ತೆಯಲ್ಲಿರುವ ಕಾವೇರಿ ನದಿಯ ಸೇತುವೆಯ ಬಳಿ ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಆತನ ತಾಯಿ ಪಾರ್ವತಿ ದೇಹ ಕಾವೇರಿ ನದಿಗೆ ಬಿದ್ದಿದ್ದ ಘಟನೆ ನಿನ್ನೆ ನಡೆದಿತ್ತು.

ಪ್ರಕರಣ ಸಂಬಂಧ ಸತತ 15 ಗಂಟೆಗಳ ಕಾಲ ಮೃತ ದೇಹ ಶೋಧ ಕಾರ್ಯ ನಡೆಸಿದ ಅಗ್ನಿಶಾಮಕ ದಳ ಸಿಬ್ಬಂದಿ ಕೊನೆಗೂ ಶವ ಹೊರ ತೆಗೆಯುವಲ್ಲಿ ಯಶಸ್ವಿಯಾದರು.

ಮೃತರು ಮೈಸೂರಿನ ಮೇಟಗಳ್ಳಿಯ ಕರಕುಶಲ ನಗರದ ನಿವಾಸಿಗಳೆಂದು ತಿಳಿದು ಬಂದಿದೆ. ತಾಯಿ ಮಗ ಒಂದೇ ಬೈಕಿನಲ್ಲಿ ಹೋಗುತ್ತಿದ್ದಾಗ ಎದುರಿಗೆ ಬಂದ ಕಾರು ಡಿಕ್ಕಿಯಾಗಿ ಅವಘಡ ಸಂಭಸಿತ್ತು.

ಅಪಘಾತದಲ್ಲಿ ಬೈಕ್ ಸವಾರ ಶಂಕರ್(21) ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದ. ಆತನ ತಾಯಿ ಪಾರ್ವತಿ ದೇಹ ನದಿಗೆ ಬಿದ್ದಿತ್ತು. ನಿನ್ನೆ ಕತ್ತಲಾದ ಕಾರಣ ಶವ ಹೊರ ತೆಗೆಯಲು ಸಾಧ್ಯವಾಗಿರಲಿಲ್ಲ. ಇಂದು ಮೃತ ಪಾರ್ವತಿ ಶವಕ್ಕಾಗಿ ಶೋಧ ಕಾರ್ಯ ನಡೆಸಿ ಶವ ಹೊರ ತೆಗೆಯುವಲ್ಲಿ ಅಗ್ನಿ ಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಇದನ್ನು ಓದಿ:-ಬೆಳಗಾವಿ। ನಿಲ್ದಾಣದ ಬಳಿಯೇ ಹಳಿ ತಪ್ಪಿದ ಗೂಡ್ಸ್‌ ರೈಲು: ತಪ್ಪಿದ ಭಾರೀ ಅನಾಹುತ

Tags: