ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ವಶಕ್ಕೆ ಪಡೆದಿದ್ದಾರೆ.
ಜೂಜಾಟಕ್ಕೆ ಇಟ್ಟಿದ್ದ 2 ಲಕ್ಷ ರೂ ಹಣವನ್ನು ವಶಕ್ಕೆ ಪಡೆದಿರುವ ಪೊಲೀಸರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





