ಮೈಸೂರು

ಟಿ.ನರಸೀಪುರ ಕುಂಭಮೇಳ: ಮೊದಲ ದಿನವೇ ಸಹಸ್ರಾರು ಭಕ್ತರಿಂದ ಪುಣ್ಯಸ್ನಾನ

ಮೈಸೂರು: ಉತ್ತರ ಪ್ರದೇಶದ ಪ್ರಯಾಗ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಲು ಸಾಧ್ಯವಾಗಿಲ್ಲ ಎಂದು ಕೊಳ್ಳುತ್ತಿದ್ದ ನಾಡಿನ ಜನತೆ ಟಿ.ನರಸೀಪುರ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿ ಪುನೀತರಾಗಿದ್ದಾರೆ.

ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ 13ನೇ ಕುಂಭಮೇಳವು ಇಂದಿನಿಂದ(ಫೆಬ್ರವರಿ.10) ಅದ್ದೂರಿಯಾಗಿ ಆರಂಭವಾಗಿದ್ದು, ಮೊದಲ ದಿನದ ಮುಂಜಾನೆಯೇ ಸಹಸ್ರಾರು ಭಕ್ತರು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ್ದಾರೆ.

ಇಂದು ಮುಂಜಾನೆ 5 ಗಂಟೆಯಿಂದಲೇ ಪುಣ್ಯ ಸ್ನಾನ ಮಾಡುವುದಕ್ಕೆ ಭಕ್ತರಿಗೆ ಅವಕಾಶ ಮಾಡಿಕೊಡಲಾಗಿದ್ದು, ಸ್ನಾನಘಟ್ಟದಲ್ಲಿ ಭಕ್ತರಿಗಾಗಿಯೇ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೀಗಾಗಿ ನಾಡಿನ ಜನತೆ ಭಕ್ತಿ ಭಾವದಿಂದ ಬಂದು ಸ್ನಾನ ಮಾಡಿ ಕೃತಜ್ಞರಾಗಿದ್ದಾರೆ. ಅಲ್ಲದೇ ಜಿಲ್ಲಾಡಳಿತದ ವತಿಯಿಂದಲೂ ಸ್ನಾನ ಮಾಡುವ ಭಕ್ತರಿಗೆ ಮುಂಜಾಗ್ರತಾ ಕ್ರಮಗಳನ್ನು ವಹಿಸಿ ಸಕಲ ಸಿದ್ಧತೆಗಳನ್ನು ಏರ್ಪಡಿಸಲಾಗಿದೆ. ಇನ್ನೂ ಈ ಕುಂಭಮೇಳವೂ ಇನ್ನೆರಡು ದಿನಗಳ ಕಾಲ ನಡೆಯಲಿದೆ.

ಅರ್ಚನ ಎಸ್‌ ಎಸ್

Recent Posts

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…

13 mins ago

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

20 mins ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

51 mins ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

2 hours ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

2 hours ago

ಕುಸಿದ ಚಿನ್ನ, ಬೆಳ್ಳಿ ಬೆಲೆ

ಬೆಂಗಳೂರು : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮಹಾಕುಸಿತ ಮುಂದುವರಿದಿದೆ. ಶುಕ್ರವಾರ ಗ್ರಾಮ್‌ಗೆ 800 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ…

2 hours ago